ವಿಹೆಚ್ ಪಿಯಿಂದ ಜಿಲ್ಲಾಧಿಕಾರಿಗಳ ಭೇಟಿ: ಕುರ್ಬನಿ ಹೆಸರಿನಲ್ಲಿ ಅಕ್ರಮ ಗೋ ಸಾಗಾಟ, ಗೋ ಹತ್ಯೆ ತಡೆಯುವಂತೆ ಆಗ್ರಹ
Monday, May 25, 2026
ಮಂಗಳೂರು: ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳದ ವತಿಯಿಂದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯವರನ್ನು ಇಂದು ಭೇಟಿ ಮಾಡಿ ಬಕ್ರೀದ್ ಸಂದರ್ಭದಲ್ಲಿ ಕುರ್ಬನಿ ಹೆಸರಿನಲ್ಲಿ ಅಕ್ರಮ ಗೋ ಸಾಗಾಟ, ಗೋ ಹತ್ಯೆಯನ್ನು ತಡೆಯಬೇಕು ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕವಾಗಿ ನಡೆಯುತ್ತಿರುವ ಅಕ್ರಮ ಕಸಾಯಿಖಾನೆಗಳನ್ನು ಮುಚ್ಚಲು ಕ್ರಮ ಕೈಗೊಳ್ಳಬೇಕೆಂದು ಅಗ್ರಹಿಸಲಾಯಿತು.
ವಿಶ್ವ ಹಿಂದೂ ಪರಿಷದ್ ನ ಹಿರಿಯರಾದ ಡಾ. ಎಂ.ಬಿ. ಪುರಾಣಿಕ್, ಮುಖಂಡರಾದ ಶರಣ್ ಪಂಪ್ವೆಲ್, ಸಂಸದ ಕ್ಯಾ. ಬ್ರಿಜೇಶ್ ಚೌಟ, ಶಾಸಕರಾದ ಉಮಾನಾಥ್ ಕೋಟ್ಯಾನ್, ಕಿಶೋರ್ ಕುಮಾರ್, ಹಾಗೂ ವಿಶ್ವ ಹಿಂದೂ ಪರಿಷದ್, ಬಜರಂಗದಳದ ಪ್ರಮುಖರು ಉಪಸ್ಥಿತರಿದ್ದರು.
