ವಿವಿಧ ಕಾರ್ಯಕ್ರಮಗಳೊಂದಿಗೆ ಗೇರು ಮೇಳದ ಸಮಾರೋಪ

ವಿವಿಧ ಕಾರ್ಯಕ್ರಮಗಳೊಂದಿಗೆ ಗೇರು ಮೇಳದ ಸಮಾರೋಪ

ಮಂಗಳೂರು: ಕರ್ನಾಟಕ ಗೇರು ಅಭಿವೃದ್ಧಿ ನಿಗಮದ ವತಿಯಿಂದ ಪ್ರಥಮ ಬಾರಿಗೆ ಮಂಗಳೂರಿನಲ್ಲಿ ನಡೆದ ರಾಜ್ಯ ಮಟ್ಟದ ಗೇರು ಮೇಳಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.ಮನೆಗೊಂದು ಗೇರು ಮರ ಯೋಜನೆಗೆ ಪೂರಕವಾಗಿ ಮೇಳಕ್ಕೆ ಬಂದವರಿಗೆ ಗೇರು ಗಿಡ ವಿತರಿಸಲಾಯಿತು. ಮುಂದಿನ ಹಂತದಲ್ಲಿ ಗೇರು ಗಿಡಗಳ ನರ್ಸರಿ ಅಭಿವೃದ್ಧಿ ಪಡಿಸಿ ಈ ಯೋಜನೆಯನ್ನು ಕಾರ್ಯಗತಗೊಳಿಸಲಾಗುವುದು ಎಂದು ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ ತಿಳಿಸಿದ್ದಾರೆ.

ಕದ್ರಿ ಉದ್ಯಾನವನದಲ್ಲಿ ರವಿವಾರ ಹಾಗೂ ಸೋಮವಾರ ನಡೆದ ಎರಡು ದಿನಗಳ ಗೇರು ಮೇಳದ ಸಾಂಸ್ಕೃತಿಕ ಕಾರ್ಯಕ್ರಮಗಳ ಸಮಾರೋಪ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾ ಡುತ್ತಿದ್ದರು.

ಎರಡು ದಿನಗಳ ಕಾಲ ನಡೆದ ಗೇರು ಮೇಳದಲ್ಲಿ ಸುಮಾರು 70ಕ್ಕೂ ಅಧಿಕ ರೈತರು ಸಣ್ಣ ಕೃಷಿ ಉತ್ಪನ್ನಗಳ ವ್ಯಾಪಾರಿಗಳು,ಗೇರು ಬೆಳೆಗಾರರು,ಮಾವು ಬೆಳೆಗಾರರಿಗೆ ತಮ್ಮ ಉತ್ಪನ್ನಗಳನ್ನು ಮಾರಾಟ ಮಾಡಲು ಉಚಿತವಾಗಿ ಮಳಿಗೆಗಳನ್ನು ನಿರ್ಮಿಸಿ ಕೊಡಲಾಗಿದೆ ಇದರಿಂದ ಅವರಿಗೆ ನಷ್ಟ ವಾಗಲಿಲ್ಲ.ಬೆಳೆಗಾರರನ್ನು ಪ್ರೋತ್ಸಾಹಿಸುವ ದೃಷ್ಟಿಯಿಂದ ಉಚಿತವಾಗಿ ಮಳಿಗೆಗಳನ್ನು ನೀಡಲಾಗಿದೆ ಎಂದರು.ಸಮಾರೋಪ ಸಮಾರಂಭ ದಲ್ಲಿ ಇಂಚರ ಮೆಲೋಡಿಸ್ ತಂಡದಿಂದ ಸಂಗೀತ ಸಂಜೆ ಕಾರ್ಯಕ್ರಮ ನಡೆಯಿತು.

ಮೇಳದ ಸಂಗೀತ ಸಂಜೆ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಸ್ಮರಣಿಕೆ ವಿತರಣೆ ಮಾಡಿದ ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್ ಮಾತನಾಡಿ, ರಾಜ್ಯ ಗೇರು ಅಭಿವೃದ್ಧಿ ನಿಗಮದ ಮೂಲಕ ಪ್ರಥಮ ಬಾರಿಗೆ ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ ಯವರ ನೇತೃತ್ವದಲ್ಲಿ ಮಾದರಿಯಾದ ಐತಿಹಾಸಿಕ ಗೇರು ಮೇಳ ನಡೆದಿದೆ. ಅದಕ್ಕಾಗಿ ಅವರನ್ನು ಅಭಿನಂಧಿಸುವುದಾಗಿ ತಿಳಿಸಿದ್ದಾರೆ.

ಮೇಳದಲ್ಲಿ ವಿದ್ಯಾರ್ಥಿಗಳಿಗಾಗಿ ಭಾಷಣ ಸ್ಪರ್ಧೆ,ಚಿತ್ರಕಲಾ ಸ್ಪರ್ಧೆ, ಮಹಿಳೆಯರಿಗೆ ರಂಗೋಲಿ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಗೇರು ಬೆಳೆ ಸಾಧಕರಿಗೆ ಸನ್ಮಾನ, ದೇವದಾಸ್ ಕಾಪಿಕಾಡ್ ತಂಡದವರಿಂದ ತುಳು ನಾಟಕ ನಮಸ್ಕಾರ ಮಾಸ್ಟ್ರೇ ಪ್ರದರ್ಶನ ಗೊಂಡಿತು. ಮೇಳದಲ್ಲಿ ಭಾಗವಹಿಸಿದವರಿಗೆ ಉಚಿತವಾಗಿ ಗೇರು ಸಸಿ ವಿತರಿಸಲಾಯಿತು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article