ಮೃತ ಫಲಾನುಭವಿಗಳ ಖಾತೆಗೆ ಹಣ ಜಮೆ: ಸೂಕ್ತ ಕ್ರಮಕ್ಕೆ ಸೂಚನೆ

ಮೃತ ಫಲಾನುಭವಿಗಳ ಖಾತೆಗೆ ಹಣ ಜಮೆ: ಸೂಕ್ತ ಕ್ರಮಕ್ಕೆ ಸೂಚನೆ


ಮಂಗಳೂರು: ಮೃತ ಗೃಹಲಕ್ಷ್ಮಿ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಇನ್ನೂ ಹಣ ಜಮೆಯಾಗುತ್ತಿದ್ದು, ಮೃತಪಟ್ಟ ಫಲಾನುಭವಿಗಳ  ಖಾತೆಗೆ ಜಮೆಯಾಗಿರುವ ಹಣವನ್ನು ಮರಳಿ ಪಡೆಯಲು ಸಂಬಂಧಪಟ್ಟ ಅಧಿಕಾರಿಗಳು ಸೂಕ್ತ  ಕ್ರಮವಹಿಸಬೇಕೆಂದು  ದ.ಕ ಜಿಲ್ಲಾ ಮಟ್ಟದ ಗ್ಯಾರಂಟಿ  ಯೋಜನೆಗಳ ಅನುಷ್ಟಾನ ಸಮಿತಿ ಅಧ್ಯಕ್ಷ ಭರತ್ ಮುಂಡೋಡಿ ಸೂಚಿಸಿದರು.

ಅವರು ಮಂಗಳವಾರ ದ.ಕ ಜಿಲ್ಲಾ ಪಂಚಾಯತ್ನಲ್ಲಿ ನಡೆದ ಜಿಲ್ಲಾ ಮಟ್ಟದ ಗ್ಯಾರಂಟಿ  ಯೋಜನೆಗಳ ಅನುಷ್ಟಾನ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜಿಲ್ಲೆಯಲ್ಲಿ ಈಗಾಗಲೇ ಮರಣ ಹೊಂದಿದ  ಗೃಹಲಕ್ಷ್ಮಿ ಫಲಾನುಭವಿಗಳ ಖಾತೆಗೆ ರೂ.22 ಕೋಟಿ ಅನುದಾನ ವರ್ಗಾವಣೆ ಆಗಿದೆ ಎಂಬ ಮಾಹಿತಿಯನ್ನು ರಾಜ್ಯ ಕಛೇರಿಯಿಂದ ತಿಳಿಸಿರುವ ಬಗ್ಗೆ ಅವರು ವಿಷಾದ ವ್ಯಕ್ತಪಡಿಸಿ, ಫಲಾನುಭವಿಗಳ ಖಾತೆಗೆ ಜಮೆಯಾಗಿರುವ ಸಹಾಯಧನ ಮೊತ್ತವನ್ನು ಸರ್ಕಾರಕ್ಕೆ ಜಮೆ ಮಾಡುವ ಬಗ್ಗೆ ಫಲಾನುಭವಿಗಳ ಮಾಹಿತಿಯನ್ನು ಪಡೆಯಲು ಕ್ರಮವಹಿಸಬೇಕು ಎಂದು ಅವರು ಹೇಳಿದರು.

ಇಲಾಖೆಯ ಮಾಹಿತಿಯಲ್ಲಿ ಜೀವಂತವಿರುವ ಗೃಹಲಕ್ಷ್ಮಿ ಫಲಾನುಭವಿಯು ಮರಣ ಹೊಂದಿರುವುದಾಗಿ ದಾಖಲಾಗಿದ್ದು,  ಈ ಬಗ್ಗೆ ಸಮಗ್ರ ತನಿಖೆ ನಡೆಸಿ ಮುಂದಿನ ಸಭೆಗೆ ವರದಿ ಸಲ್ಲಿಸುವಂತೆ ಅಧ್ಯಕ್ಷರು ಸೂಚಿಸಿದರು.

ಗೃಹಲಕ್ಷ್ಮಿ ಯೋಜನೆಯಡಿ 425759 ಒಟ್ಟು ಪಡಿತರ ಚೀಟಿ ಹೊಂದಿರುವ ಫಲಾನುಭವಿಗಳ ಪೈಕಿ ಈವರೆಗೆ ಒಟ್ಟು 1548 ಫಲಾನುಭವಿಗಳು ನೊಂದಾಯಿಸಿಕೊಂಡಿದ್ದು, ಒಟ್ಟು 3,82,178 ಫಲಾನುಭವಿಗಳು ನೊಂದಾಯಿಸಿಕೊಂಡಿರುತ್ತಾರೆ ಎಂದು  ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ  ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.

ಮರಣ ಹೊಂದಿದ ಫಲಾನುಭವಿಯ ಹೆಸರು, ಖಾತೆ ಸಂಖ್ಯೆ ಹಾಗೂ ಬ್ಯಾಂಕಿನ ವಿವರಗಳು ಇದ್ದಲ್ಲಿ ಬ್ಯಾಂಕ್ ಮುಖಾಂತರ ಕ್ರಮಕೈಗೊಳ್ಳಬಹುದು. ಇಲ್ಲವಾದಲ್ಲಿ ಗ್ರಾಮದಲ್ಲಿ ಮರಣಹೊಂದಿದವರ ಮಾಹಿತಿ ಗ್ರಾಮ ಕರಣಿಕರ ಕಚೇರಿಯಲ್ಲಿ ಲಭ್ಯವಿರುತ್ತದೆ. ಅಂತಹ ಮಾಹಿತಿಯನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಪಡೆದಲ್ಲಿ ಮರಣ ಹೊಂದಿದ ಫಲಾನುಭವಿಯ ಖಾತೆಗೆ ಸಹಾಯಧನ ಬಿಡುಗಡೆ ಮಾಡುವುದನ್ನು ತಡೆಹಿಡಿಯಬಹುದು.  ಮೃತ ಫಲಾನುಭವಿಯ ಮರಣ ಪ್ರಮಾಣ ಪತ್ರ ಬಂದ ತಕ್ಷಣ ಫಲಾನುಭವಿಗಳ ಪಟ್ಟಿಯಿಂದ ಹೆಸರನ್ನು ತೆಗೆಯಬೇಕು.  ಅವರ ಹೆಸರು, ಬ್ಯಾಂಕ್ ವಿವರಗಳಿದ್ದಲ್ಲಿ ಬ್ಯಾಂಕ್ ಮುಖಾಂತರ ಖಾತೆಯನ್ನು ಸ್ಥಗಿತಗೊಳಿಸಲು ಕ್ರಮವಹಿಸಬೇಕು ಎಂದು ಅವರು ಸೂಚಿಸಿದರು.

ಅನ್ನಭಾಗ್ಯ ಯೋಜನೆಯಡಿ ಅರ್ಕುಳ ಪಡಿತರ ಅಂಗಡಿಯನ್ನು ತೆರೆಯುವ ಬಗ್ಗೆ ವಿಷಯವು ಪ್ರಸ್ತಾಪವಾಗಿ 7 ತಿಂಗಳಾಗಿದ್ದರೂ, ಇನ್ನೂ ಸಮಸ್ಯೆ ಬಗೆಹರಿದಿರುವುದಿಲ್ಲ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಯ ಅನು??ಠನ ಪ್ರಾಧಿಕಾರದ ಸದಸ್ಯರು ವಿಚಾರಿಸಿದಾಗ ಸರ್ಕಾರದ ಆದೇಶದ ಪ್ರಕಾರ ಜಿಲ್ಲಾಧಿಕಾರಿಗಳ ಸಮಿತಿಯಲ್ಲಿ ಅನುಮೋದನೆಯಾದ ನಂತರ ಪಡಿತರ ಅಂಗಡಿಯನ್ನು ತೆರೆಯಲಾಗುವುದೆಂದು ಇಲಾಖಾಧಿಕಾರಿಗಳು ತಿಳಿಸಿದಾಗ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯಲ್ಲಿ ಸದರಿ ಸಭೆಯಲ್ಲಿ ಚರ್ಚೆಯಾಗುತ್ತಿದ್ದ ವಿಷಯಗಳಿಗೆ ಹಲವು ತಿಂಗಳಿನಿಂದ ಸಮಸ್ಯೆ ಬಗೆಹರಿದಿರುವುದಿಲ್ಲ. ಜಿಲ್ಲಾಧಿಕಾರಿಗಳ ಸಮಿತಿಯಲ್ಲಿ ಅನುಮೋದನೆಯಾಗಬೇಕಾದಲ್ಲಿ ಜಿಲ್ಲಾಧಿಕಾರಿಗಳೊಂದಿಗೆ ಇಂತಹ ಸಮಸ್ಯೆಯನ್ನು ಬಗೆಹರಿಸಲು ಚರ್ಚಿಸಿ ಕ್ರಮ ಕೈಗೊಳ್ಳುವಂತೆ  ಅಧ್ಯಕ್ಷರು ಸೂಚಿಸಿದರು.

ಜಿಲ್ಲಾ ಪಂಚಾಯತ್ ಯೋಜನಾ ಅಂದಾಜು ಮತ್ತು ಮೌಲ್ಯಮಾಪನ ಅಧಿಕಾರಿ ಸುಷ್ಮಾ ಕೆ. ಎಸ್,  ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಉಪಾಧ್ಯಕ್ಷ ಜೋಕಿಂ ಡಿಸೋಜಾ, ನಾರಾಯಣ ನಾಯಕ್, ಸದಸ್ಯರಾದ ಅರುಣ್ ಕುಮಾರ್ ಶೆಟ್ಟಿ, ಆಲ್ವಿನ್ ಕ್ಲೆಮೆಂಟ್ ಕುಟಿನ್ಹ,  ಜಯಂತಿ ಬಿಎ, ಶಾಹುಲ್ ಹಮೀದ್, ಉಮಾನಾಥ್ ಶೆಟ್ಟಿ, ಪದ್ಮನಾಭ ಸಾಲ್ಯಾನ್,  ಸುಧೀರ್ ಕುಮಾರ್ ಶೆಟ್ಟಿ  ಮತ್ತಿತರರು ಉಪಸ್ಥಿತರಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article