ಮೆಸ್ಕಾಂ: ಭಯೋತ್ಪಾದನೆ ವಿರೋಧಿ ದಿನ
Friday, May 22, 2026
ಮಂಗಳೂರು: ನಗರದ ಬಿಜೈಯಲ್ಲಿರುವ ಮೆಸ್ಕಾಂ ಕಾರ್ಪೊರೇಟ್ ಕಚೇರಿಯಲ್ಲಿ ಭಯೋತ್ಪಾದನೆ ವಿರೋಧಿ ದಿನ ಅಂಗವಾಗಿ ಭಯೋತ್ಪಾದನೆ ವಿರುದ್ಧ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮ ನಡೆಯಿತು.
ಮೆಸ್ಕಾಂ ಮುಖ್ಯ ಆರ್ಥಿಕ ಅಧಿಕಾರಿ ಮುರಳೀಧರ ನಾಯಕ್, ಸಹಿತ ಹಿರಿಯ ಅಧಿಕಾರಿಗಳು, ಸಿಬ್ಬಂಧಿ ವರ್ಗ ಉಪಸ್ಥಿತರಿದ್ದರು.
ಸಾರ್ವಜನಿಕ ಸಂಪರ್ಕಾಧಿಕಾರಿ ವಸಂತ ಶೆಟ್ಟಿ ಪ್ರಮಾಣ ವಚನ ಕಾರ್ಯಕ್ರಮ ನಿರ್ವಹಿಸಿದರು.