“ಜೈವರಸಾಯನಿಕಶಾಸ್ತ್ರ ವಿಜ್ಞಾನದಲ್ಲಿ ಸವಾಲುಗಳು ಮತ್ತು ಅವಕಾಶಗಳು”: ಉಪನ್ಯಾಸ

“ಜೈವರಸಾಯನಿಕಶಾಸ್ತ್ರ ವಿಜ್ಞಾನದಲ್ಲಿ ಸವಾಲುಗಳು ಮತ್ತು ಅವಕಾಶಗಳು”: ಉಪನ್ಯಾಸ


ಮಂಗಳೂರು: ಇಲ್ಲಿನ ರಥಬೀದಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿಜ್ಞಾನ ವಿಭಾಗದ ಆಶ್ರಯದಲ್ಲಿ ಮೇ 14  ರಂದು “ಜೈವರಸಾಯನಿಕಶಾಸ್ತ್ರ ವಿಜ್ಞಾನದಲ್ಲಿ ಸವಾಲುಗಳು ಮತ್ತು ಅವಕಾಶಗಳು” ಎಂಬ ವಿಷಯದ ಕುರಿತು ವಿಜ್ಞಾನ ಉಪನ್ಯಾಸ ಕಾರ್ಯಕ್ರಮ ನಡೆಯಿತು. 

ಕಾರ್ಯಕ್ರಮದ ಮುಖ್ಯ ಭಾಷಣಕಾರರಾಗಿ ಮಂಗಳೂರು ವಿಶ್ವವಿದ್ಯಾಲಯ ಜೈವರಸಾಯನಿಕಶಾಸ್ತ್ರ ವಿಭಾಗ ಮುಖ್ಯಸ್ಥ ಡಾ. ಚಂದ್ರಶೇಖರ ಜಿ. ಜೋಶಿ ಭಾಗವಹಿಸಿ ಜೈವರಸಾಯನಿಕ ವಿಜ್ಞಾನದ ಇಂದಿನ ಬೆಳವಣಿಗೆಗಳು, ಸವಾಲುಗಳು ಹಾಗೂ ಉದ್ಯೋಗಾವಕಾಶಗಳ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿಪೂರ್ಣ ಉಪನ್ಯಾಸ ನೀಡಿದರು. 


ಆರೋಗ್ಯ, ಜೈವ ತಂತ್ರಜ್ಞಾನ, ಔಷಧ ನಿರ್ಮಾಣ, ಪರಿಸರ ಅಧ್ಯಯನ ಮತ್ತು ಸಂಶೋಧನಾ ಕ್ಷೇತ್ರಗಳಲ್ಲಿ ಜೈವರಸಾಯನಿಕ ವಿಜ್ಞಾನದ ಮಹತ್ವವನ್ನು ಅವರು ವಿವರಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಣಿಶಾಸ್ತ್ರ ವಿಭಾಗ ಮುಖ್ಯಸ್ಥೆ ಪ್ರೊ. ವಸಂತಿ ಪಿ. ವಹಿಸಿದ್ದರು. ಐಶ್ವರ್ಯ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಭೂಮಿಕಾ ಅತಿಥಿ ಪರಿಚಯ ಮಾಡಿಕೊಟ್ಟರು. ಅನನ್ಯ ವಂದಿಸಿದರು.

ಈ ಸಂದರ್ಭದಲ್ಲಿ ಸಸ್ಯಶಾಸ್ತ್ರ ವಿಭಾಗದ ಉಪನ್ಯಾಸಕಿ ಅಮೃತಾ, ಪ್ರಾಣಿಶಾಸ್ತ್ರ ವಿಭಾಗದ ಉಪನ್ಯಾಸಕಿ ಪುಷ್ಪಶ್ರೀ ಹಾಗೂ ತರಗತಿ ಮಾರ್ಗದರ್ಶಕ ಡಾ. ಮೋಹನ್ ದಾಸ್ ಉಪಸ್ಥಿತರಿದ್ದರು. ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿ ಕಾರ್ಯಕ್ರಮದ ಪ್ರಯೋಜನ ಪಡೆದುಕೊಂಡರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article