ಓಲೈಕೆಗಾಗಿ ಬ್ರದರ್ಸ್ ಗಳಿಗೆ ಅಮಾಯಕ ಪಟ್ಟ ಕಟ್ಟಿದ ಕಾಂಗ್ರೆಸ್: ಶಾಸಕ ಕಾಮತ್ ಆಕ್ರೋಶ
Friday, May 22, 2026
ಮಂಗಳೂರು: ಕಲಬುರಗಿಯ ಆಳಂದದ ಲಾಡ್ಲೆ ಮಶಾಕ್ ದರ್ಗಾದಲ್ಲಿ ಪವಿತ್ರ ಶಿವಲಿಂಗದ ಮೇಲೆ ಮಲಮೂತ್ರ ವಿಸರ್ಜಿಸಿ, ಭಕ್ತರ, ಜಿಲ್ಲಾಧಿಕಾರಿಗಳ, ಪೊಲೀಸರ ಮೇಲೆ ಹಲ್ಲೆ ಮಾಡಿದ ಕಾಂಗ್ರೆಸ್ಸಿನ ಬ್ರದರ್ಸ್ ಗಳು ಅಮಾಯಕರಲ್ಲ, ಅವರ ಮೇಲಿನ ಪ್ರಕರಣ ಹಿಂತೆಗೆದುಕೊಳ್ಳಬಾರದು, ಅವರಿಗೆ ತಕ್ಕ ಶಿಕ್ಷೆ ಆಗಲೇಬೇಕು ಎಂದು ಶಾಸಕ ವೇದವ್ಯಾಸ ಕಾಮತ್ ಅವರು ರಾಜ್ಯ ಕಾಂಗ್ರೆಸ್ ಸರ್ಕಾರ ವಿರುದ್ಧ ಪ್ರಕಟಣೆಯಲ್ಲಿ ಹರಿಹಾಯ್ದರು.
ಇಂತಹ ಗಂಭೀರ ಕೃತ್ಯ ನಡೆಸಿದ ಆರೋಪಿಗಳ ಮೇಲಿನ ಪ್ರಕರಣವನ್ನು ಕೈಬಿಡುವಂತೆ ಸ್ಪೀಕರ್ ಯು.ಟಿ. ಖಾದರ್ ಅವರೇ ಸ್ವತಃ ಸರ್ಕಾರಕ್ಕೆ ಶಿಫಾರಸು ಮಾಡಿರುವ ವರದಿ ಅಂತೂ ಪ್ರಜಾಪ್ರಭುತ್ವಕ್ಕೆ ಬಗೆದ ದ್ರೋಹ ಮಾತ್ರವಲ್ಲ, ಅತ್ಯಂತ ಆತಂಕಕಾರಿ ಸಂಗತಿ. ಕಾಂಗ್ರೆಸ್ ಸರ್ಕಾರ ಹಿಂದೂ ಕಾರ್ಯಕರ್ತರ ಮೇಲೆ ಸುಳ್ಳು ಪ್ರಕರಣ ದಾಖಲಿಸಿ, ರೌಡಿ ಶೀಟ್ ತೆರೆಯುತ್ತಾ, ಮುಸ್ಲಿಂ ಮೂಲಭೂತವಾದಿಗಳ ವಿರುದ್ಧದ ಪ್ರಕರಣಗಳನ್ನು ಹಿಂಪಡೆದು ಇನ್ನಷ್ಟು ದುಷ್ಕೃತ್ಯಕ್ಕೆ ಬೆಂಬಲ ನೀಡುತ್ತಿದೆ.
ಕೇವಲ ತಮ್ಮ ಸ್ವಾರ್ಥಕ್ಕಾಗಿ ಸಮಾಜಘಾತುಕ ಶಕ್ತಿಗಳಿಗೆ ಪ್ರೇರಣೆ ನೀಡಿ ಬಹುಸಂಖ್ಯಾತ ಹಿಂದೂಗಳ ಧಾರ್ಮಿಕ ಭಾವನೆಗಳನ್ನು ಕಡೆಗಣಿಸುವುದು ಖಂಡನೀಯವಾಗಿದ್ದು, ನಾಡಿನ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಈ ಕೂಡಲೇ ತಮ್ಮ ಅವಿವೇಕದ ನಿರ್ಧಾರವನ್ನು ಹಿಂಪಡೆಯಬೇಕು ಎಂದು ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ಆಗ್ರಹಿಸಿದರು.