ಮಳೆಗಾಲದಲ್ಲಿ ಮೀನುಗಾರಿಕೆ  ನಿಷೇಧ

ಮಳೆಗಾಲದಲ್ಲಿ ಮೀನುಗಾರಿಕೆ ನಿಷೇಧ

ಮಂಗಳೂರು: ದ. ಕ. ಜಿಲ್ಲೆಯ ಟೆರಿಟೋರಿಯಲ್ ವಾಟರ್ಸ್ (12 ನಾಟಿಕಲ್ ಮೈಲ್ ವರೆಗಿನ) ಭಾಗದಲ್ಲಿ ಯಾವುದೇ ಬಲೆಗಳನ್ನು / ಸಾಧನಗಳನ್ನು ಉಪಯೋಗಿಸಿ ಎಲ್ಲಾ ಯಾಂತ್ರೀಕೃತ ದೋಣಿಗಳ ಮುಖಾಂತರ ಹಾಗೂ 10 ಅಶ್ವಶಕ್ತಿ ಸಾಮಥ್ರ್ಯಕ್ಕಿಂತ ಮೇಲ್ಪಟ್ಟ ಮೋಟಾರೀಕೃತ ದೋಣಿ ಮುಖಾಂತರ ಕೈಗೊಳ್ಳುವ ಮೀನುಗಾರಿಕೆ ಚಟುವಟಿಕೆಯನ್ನು ಜೂ.1 ರಿಂದ ಜುಲೈ 31 ರವರೆಗೆ (ಉಭಯ ದಿನಗಳು ಸೇರಿ) ಒಟ್ಟು 61 ದಿನಗಳ ನಿಷೇಧವನ್ನು ಹೇರಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

ನಿಷೇಧದ ಅವಧಿಯಲ್ಲಿ ಜಿಲ್ಲೆಯಲ್ಲಿ ದೋಣಿಯನ್ನು ಸಾಗಿಸುವ ಉದ್ದೇಶಕ್ಕಾಗಿಯೇ 10 ಅಶ್ವಶಕ್ತಿವರೆಗಿನ ಸಾಮಥ್ರ್ಯದ ಮೋಟಾರೀಕೃತ ದೋಣಿ ಮತ್ತು ಸಾಂಪ್ರದಾಯಿಕ ನಾಡದೋಣಿಗಳು ಕರಾವಳಿ ಮೀನುಗಾರಿಕೆಯನ್ನು ಕೈಗೊಳ್ಳಲು ಅನುಮತಿಸಿದೆ. 

ಮೀನುಗಾರಿಕೆ ನಿಷೇಧಿಸಿದ ಆದೇಶವನ್ನು ಉಲ್ಲಂಘಿಸುವ ಮೀನುಗಾರಿಕಾ ದೋಣಿಗಳು ಮತ್ತು ಮೀನುಗಾರರು ಕರ್ನಾಟಕ ಕಡಲ ಮೀನುಗಾರಿಕೆ ಕಾಯ್ದೆ-1986ರಲ್ಲಿ ವಿಧಿಸಲಾಗಿರುವ ದಂಡನೆಗಳಿಗೆ ಹೊಣೆಯಾಗುವುದಲ್ಲದೇ ಒಂದು ವರ್ಷದ ಅವಧಿಗೆ ರಾಜ್ಯ ಮಾರಾಟ ಕರ ರಹಿತ ಡೀಸೆಲ್ ಪಡೆಯಲು ಅನರ್ಹರಾಗುತ್ತಾರೆ. ಈ ಆದೇಶವನ್ನು ಕರಾವಳಿ ಪ್ರದೇಶದ ಎಲ್ಲಾ ಮೀನುಗಾರರು ಪಾಲಿಸಬೇಕು ಎಂದು ಮೀನುಗಾರಿಕೆ ಇಲಾಖೆಯ ಜಂಟಿ ನಿರ್ದೇಶಕರ ಪ್ರಕಟಣೆ ತಿಳಿಸಿದೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article