ರಾಜಕಾಲುವೆ ತಡೆಗೋಡೆ ನಿರ್ಮಾಣಕ್ಕೆ ಭೂಮಿಪೂಜೆ
Friday, May 22, 2026
ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 51ನೇ ಅಳಪೆ ಉತ್ತರ ವಾರ್ಡಿನ ಕನ್ನಗುಡ್ಡೆ ಸಂತೋಷ್ ಮನೆಯ ರಾಜಕಾಲುವೆ ಕುಸಿದ ಭಾಗಕ್ಕೆ ತಡೆಗೋಡೆ ನಿರ್ಮಾಣ ಕಾಮಗಾರಿಗಾಗಿ ಸುಮಾರು ಹತ್ತು ಲಕ್ಷ ವೆಚ್ಚದಲ್ಲಿ ನಡೆಯಲಿದ್ದು ಹಲವು ಪ್ರಮುಖರ ಉಪಸ್ಥಿತಿಯಲ್ಲಿ ಭೂಮಿ ಪೂಜೆಯು ನಡೆಯಿತು.
ಕನ್ನಗುಡ್ಡೆಯು ಎತ್ತರದ ಪ್ರದೇಶವಾಗಿದ್ದು, ಪ್ರಾಕೃತಿಕ ವಿಕೋಪ ಸಂದರ್ಭದಲ್ಲಿ ಹಾನಿ ಪ್ರಮಾಣವೂ ಹೆಚ್ಚಾಗಿರುತ್ತದೆ. ಈ ಹಿಂದೆ ಮಳೆಗಾಲದದಲ್ಲಿ ಉಂಟಾಗಿರುವ ಹಾನಿಯನ್ನು ಸರಿಪಡಿಸುವ ನಿಟ್ಟಿನಲ್ಲಿ ಈ ಕಾಮಗಾರಿ ಆರಂಭವಾಗಲಿದೆ.
ಪ್ರವೀಣ್ ನಿಡ್ಡೇಲ್, ಸುರೇಶ್ ಆಚಾರ್, ಸುರೇಶ್ ಕನ್ನಗುಡ್ಡ, ದೀಕ್ಷಿತ್ ಕನ್ನಗುಡ್ಡ, ಕಿಶೋರ್, ಗಣೇಶ್, ವಿವೇಕ್, ವಿಜಯ್, ಸುಧೇಶ್, ದೀಕ್ಷಿತ್ ಅರ್ಲಬೆಟ್ಟು, ಕವಿರಾಜ್, ದಾಮೋದರ್ ಮತ್ತಿತರರು ಉಪಸ್ಥಿತರಿದ್ದರು.