ಸಚಿವರಾಗಿದ್ದ ಸುಧಾಕರ್ ಡಿ. ಅವರ ನಿಧನಕ್ಕೆ ಸ್ಪೀಕರ್ ಸಂತಾಪ

ಸಚಿವರಾಗಿದ್ದ ಸುಧಾಕರ್ ಡಿ. ಅವರ ನಿಧನಕ್ಕೆ ಸ್ಪೀಕರ್ ಸಂತಾಪ

ಮಂಗಳೂರು: ಕರ್ನಾಟಕ ವಿಧಾನಸಭೆಯ ಹಿರಿಯ ಸದಸ್ಯರು ಹಾಗೂ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವರಾಗಿದ್ದ ಸುಧಾಕರ್ ಡಿ. ಅವರ ನಿಧನದ ಸುದ್ದಿ ತಿಳಿದು ಅಪಾರ ದುಃಖವಾಗಿದೆ ಎಂದು ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಫರೀದ್ ಸಂತಾಪ ಸೂಚಿಸಿದರು.

ಸುಧಾಕರ್ ಡಿ. ಅವರು 4 ಬಾರಿ ವಿಧಾನಸಭಾ ಸದಸ್ಯರಾಗಿ, ಸಮಾಜ ಕಲ್ಯಾಣ ಸಚಿವರಾಗಿ ಹಾಗೂ ವಿವಿಧ ಪ್ರಮುಖ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ್ದ ಮೃತರು 

ಸರಳ ವ್ಯಕ್ತಿತ್ವ ಮತ್ತು ಜನಪರ ಕಾರ್ಯಗಳಿಂದ ಅವರು ಜನಮನದಲ್ಲಿ ವಿಶೇಷ ಸ್ಥಾನ ಪಡೆದಿದ್ದರು. ಅವರ ಅಗಲಿಕೆ ರಾಜ್ಯಕ್ಕೆ ಮತ್ತು ಹಿರಿಯೂರು ಕ್ಷೇತ್ರದ ಜನತೆಗೆ ತುಂಬಲಾರದ ನಷ್ಟವಾಗಿದೆ. ಅವರ ಅಗಲಿಕೆಯ ದುಃಖವನ್ನು ಭರಿಸುವ ಸರ್ವ ಶಕ್ತಿಯನ್ನು ಅವರ ಕುಟುಂಬದವರಿಗೆ, ಬಂಧುಗಳಿಗೆ ಮತ್ತು ರಾಜ್ಯದ ಜನತೆಗೆ ನೀಡಲಿ ಹಾಗೂ ಅಗಲಿದ ಆತ್ಮಕ್ಕೆ ಚಿರ ಶಾಂತಿ ದೊರಕಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಯು.ಟಿ. ಖಾದರ್ ಫರೀದ್ ಸಂತಾಪ ಸೂಚಿಸಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article