ಸಚಿವ ಡಿ.ಸುಧಾಕರ್ ನಿಧನಕ್ಕೆ ಡಾ. ಎಂ.ಎನ್. ರಾಜೇಂದ್ರಕುಮಾರ್ ಸಂತಾಪ

ಸಚಿವ ಡಿ.ಸುಧಾಕರ್ ನಿಧನಕ್ಕೆ ಡಾ. ಎಂ.ಎನ್. ರಾಜೇಂದ್ರಕುಮಾರ್ ಸಂತಾಪ

ಮಂಗಳೂರು: ಕರ್ನಾಟಕ ರಾಜ್ಯ ಸರ್ಕಾರದ ಸಚಿವರು ಹಾಗೂ ಕಾರ್ಕಳ ಭಗವಾನ್ ಶ್ರೀ ಬಾಹುಬಲಿ ಸ್ವಾಮಿಯ ಮಹಾಮಸ್ತಾಕಾಭಿಷೇಕ ಸಮಿತಿಯ ಗೌರವ ಸಂರಕ್ಷಕರಾದ ಡಿ.ಸುಧಾಕರ್ ಅವರ ನಿಧನಕ್ಕೆ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ, ಎಸ್‌ಸಿಡಿಸಿಸಿ ಬ್ಯಾಂಕಿನ ಅಧ್ಯಕ್ಷರು ಹಾಗೂ ಕಾರ್ಕಳ ಭಗವಾನ್ ಶ್ರೀ ಬಾಹುಬಲಿ ಸ್ವಾಮಿಯ ಮಹಾಮಸ್ತಾಕಾಭಿಷೇಕ ಸಮಿತಿಯ ಕಾರ್ಯಾಧ್ಯಕ್ಷ ಡಾ. ಎಂ.ಎನ್. ರಾಜೇಂದ್ರಕುಮಾರ್ ಸಂತಾಪ ವ್ಯಕ್ತಪಡಿಸಿದ್ದಾರೆ.

ಡಿ.ಸುಧಾಕರ್ ಅವರು ಚಿತ್ರದುರ್ಗ ಜಿಲ್ಲೆಯ ಹಿರಿಯ ರಾಜಕಾರಣಿಯಾಗಿದ್ದು, ಜಿಲ್ಲೆಯ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಪ್ರಸ್ತುತ ರಾಜ್ಯ ಸಚಿವ ಸಂಪುಟದಲ್ಲಿ ಯೋಜನೆ ಮತ್ತು ಸಾಂಖ್ಯಿಕ ಇಲಾಖೆಯ ಜವಾಬ್ದಾರಿಯನ್ನು ಹೊತ್ತಿದ್ದ ಅವರು, ಜನಾನುರಾಗಿ ನಾಯಕರಾಗಿ ಗುರುತಿಸಿಕೊಂಡಿದ್ದರು. ಮಾತ್ರವಲ್ಲ ಸದಾ ಸಮಾಜಮುಖಿ ಸೇವಾ ಕಾರ್ಯಗಳ ಮೂಲಕ ಗುರುತಿಸಿಕೊಂಡು ಜೈನ ಸಮಾಜಕ್ಕೆ ಹಾಗೂ ಧರ್ಮ ಸಮನ್ವಯತೆಗೆ ಅವರು ಅಪಾರ ಕೊಡುಗೆಯನ್ನು ನೀಡಿದ್ದಾರೆ.

ಸಹಕಾರ ಕ್ಷೇತ್ರದಲ್ಲೂ ತನ್ನನ್ನು ತಾನು ತೊಡಗಿಸಿಕೊಂಡಿದ್ದ ಅವರ ನಿಧನದ ಸುದ್ದಿ ಅತೀವ ದುಃಖವನ್ನು ತಂದಿದೆ ಎಂದು ಡಾ. ಎಂ.ಎನ್. ರಾಜೇಂದ್ರಕುಮಾರ್ ತಮ್ಮ ಸಂತಾಪದಲ್ಲಿ ತಿಳಿಸಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article