ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳಲ್ಲೂ ತೊಡಗಿಸಿಕೊಳ್ಳಿ: ಶರತ್ ಭಂಡಾರಿ

ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳಲ್ಲೂ ತೊಡಗಿಸಿಕೊಳ್ಳಿ: ಶರತ್ ಭಂಡಾರಿ


ಮಂಗಳೂರು: ವಿದ್ಯಾರ್ಥಿಗಳು ಪಠ್ಯ ಮತ್ತು ಪಠ್ಯೇತರ ಚಟುವಟಿಕೆ ಎರಡರಲ್ಲೂ ತೊಡಗಿಸಿಕೊಂಡಾಗ ಮಾತ್ರ ಸಂಪೂರ್ಣ ವ್ಯಕ್ತಿತ್ವ ವಿಕಸನ ಸಾಧ್ಯವಾಗುತ್ತದೆ ಎಂದು ನಿವೃತ್ತ ಸೇನಾಧಿಕಾರಿ ಹಾಗೂ ವಿವಿ ಕಾಲೇಜಿನ ಹಳೆ ವಿದ್ಯಾರ್ಥಿ ಸಂಘದ ಪೂರ್ವತನ ಅಧ್ಯಕ್ಷ ಕರ್ನಲ್ ನಿಟ್ಟೆಗುತ್ತು ಶರತ್ ಭಂಡಾರಿ ವಿದ್ಯಾರ್ಥಿಗಳಿಗೆ ಕರೆ ನೀಡಿದರು. 


ನಗರದ ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿದ್ದ ಪತ್ರಿಭಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. 


ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದರಿಂದ ಆತ್ಮಸ್ಥೈರ್ಯ ಹೆಚ್ಚುತ್ತದೆ. ವಿದ್ಯಾರ್ಥಿಗಳಿಗೆ ತಮ್ಮ ವ್ಯಾಸಂಗದ ಅವಧಿಯಲ್ಲಿ ದಾರಿ ತಪ್ಪಲು ಸಾಕಷ್ಟು ಅವಕಾಶಗಳಿರುತ್ತವೆ. ಅವುಗಳನ್ನು ಮೆಟ್ಟಿನಿಂತು ಭವಿಷ್ಯದ ಹಾದಿ ಕಡೆಗೆ ಮುಖ ಮಾಡಬೇಕಿದೆ. ದೇಶದ ಬೆಳವಣಿಗೆ ಕುರಿತು ಜವಾಬ್ದಾರಿ ಅರಿತು ಕೊಡುಗೆ ನೀಡಬೇಕಿದೆ. ಬದುಕಿನಲ್ಲಿ ಎಷ್ಟೇ ಎತ್ತರಕ್ಕೆ ಬೆಳೆದರೂ ಮುನುಷ್ಯತ್ವವನ್ನು ಮರೆಯದೇ ಮುಂದೆ ಸಾಗುವಂತೆ ಸಲಹೆ ನೀಡಿದರು. 

ಸೌರಭ ಕಲಾ ಪರಿಷತ್ ನಿರ್ದೇಶಕಿ ಡಾ. ಶ್ರೀವಿದ್ಯಾ, ವ್ಯಕ್ತಿ ಬೆಳೆದಂತೆ ತಮ್ಮಲ್ಲಿರುವ ಕಲೆ ಮಾಯವಾಗುತ್ತದೆ. ಆದರೆ ಬದುಕು ನಡೆಸುವುದು ಕೂಡ ಒಂದು ಕಲೆಯೇ ಆಗಿದೆ ಎಂಬುದನ್ನು ಅರಿಯಬೇಕು. ಬದುಕಿನ ಸಣ್ಣ ಸಣ್ಣ ಕಾರ್ಯಗಳಲ್ಲೂ ಕಲೆಯೇ ಪ್ರಧಾವಾಗಿರುತ್ತದೆ. ಆರೆ, ಆಧುನಿಕ ಜಗತ್ತಿನಲ್ಲಿ ಬದುಕುವ ಕಲೆಯನ್ನೇ ಮರೆಯುತ್ತಿರುವುದು ವಿಪರ್ಯಾಸ ಎಂದರು. 

ವಿದ್ಯಾರ್ಥಿಗಳು ಮನಸ್ಸು ಮಾಡಿದರೆ ತಮ್ಮಲ್ಲಿರುವ ಕಲೆಯ್ನನೇ ಉದ್ಯೋಗವನ್ನಾಗಿ ಬೆಳೆಸುವ ಮೂಲಕ ಸಮಾಜದಲ್ಲಿರುವ ನಿರುದ್ಯೋಗ ಸಮಸ್ಯೆಯನ್ನು ಹೋಗಲಾಡಿಸಲು ಸಾಧ್ಯವಿದೆ. ಆ ಮೂಲಕ ಪ್ರತಿಯೊಬ್ಬರೂ ಒಂದೊಂದು ಬ್ರಾಂಡ್ ಆಗಿ ಬದಲಾಗಬಹುದಾಗಿದೆ. ಕಲೆ ಬದುಕಿನಲ್ಲಿ ಶಾಂತಿ, ಸಕಾರಾತ್ಮಕ ಚಿಂತನೆ ಹಾಗೂ ಆರ್ಥಿಕತೆಗೆ ಸಹಾಯ ಮಾಡುತ್ತದೆ. ಸಮಾಧಾನದಿಂದ ಬದುಕನ್ನು ಕಟ್ಟಿಕೊಳ್ಳುವುದು ಕೂಡ ಕಲೆಯ ಬಾಗವಾಗಿದೆ. ಹಾಗಾಗಿ, ವಿದ್ಯಾರ್ಥಿಗಳು ಈ ನಿಟ್ಟಿನಲ್ಲಿ ಆಲೋಚನೆ ಮಾಡಿ ಬದುಕನ್ನು ಹಸನು ಮಾಡಿಕೊಳ್ಳಬೇಕಿದೆ ಎಂದು ಆಶಯ ವ್ಯಕ್ತಪಡಿಸಿದರು. 

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಪ್ರೊ. ಗಣಪತಿ ಗೌಡ ಎಸ್., ಬದುಕಿನಲ್ಲಿ ಪ್ರತಿಭೆ, ಕೌಶಲ್ಯ ಬಹಳ ಮುಖ್ಯ. ಒಂದು ಸಂಸ್ಥೆಯಿಂದ ವಿದ್ಯಾಭ್ಯಾಸ ಪೂರೈಸಿದ ನಂತರ ಆ ಸಂಸ್ಥೆಯೊಂದಿಗಿನ ಸಂಬಂಧ ಪ್ರಾರಂಭವಾಗುತ್ತದೆ. ಹೀಗೆ ಆರಂಭವಾಗುವ ಸಂಬಂಧದಲ್ಲಿ ನಿರಂತರತೆಯನ್ನು ಕಾಯ್ದುಕೊಳ್ಳಬೇಕಿದೆ. ಮನುಷ್ಯ ಬೆಳೆದಂತೆ ಬೆಳೆಯುವ ಅಹಂಕಾರವನ್ನು ಮೆಟ್ಟಿ ನಿಂತು ಬದುಕನ್ನು ರೂಪಿಸಿಕೊಳ್ಳಬೇಕಿದೆ ಎಂದು ಹೇಳಿದರು. 

ಇದೇ ವೇಳೆ, ಲಲಿತ ಕಲಾ ಸಂಘದ ವತಿಯಿಂದ ಸಂಘದ ಕಾರ್ಯ ಚಟುವಟಿಕೆಗಳ ಕೈಪಿಡಿಯನ್ನು ಬಿಡುಗಡೆ ಮಾಡಲಾಯಿತು. ಅಲ್ಲದೇ, ಸಂಘದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ವಿದ್ಯಾರ್ಥಿ ಸಂಘದ ಸಹ ನಿರ್ದೇಶಕ ಪ್ರೊ. ಜಯವಂತ ನಾಯಕ್ ಅತಿಥಿಗಳನ್ನು ಸ್ವಾಗತಿಸಿದರೆ, ಲಲಿತ ಕಲಾ ಸಂಘದ ಸಹ ನಿರ್ದೇಶಕಿ ಡಾ. ನಾಗರತ್ನ ಕೆ.ಎ. ಲಲಿತ ಕಲಾ ಸಂಘದ ವರದಿ ವಾಚನ ಮಾಡಿದರು. ಇದೇ ವೇಳೆ, ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು, ಕಾಲೇಜಿನ ವಿವಿಧ ವಿಭಾಗಗಳ ಉಪನ್ಯಾಸಕರು, ಹಳೆ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article