ಗಡಿಪಾರು: ತಿಮರೋಡಿ ಅರ್ಜಿ ವಜಾ

ಗಡಿಪಾರು: ತಿಮರೋಡಿ ಅರ್ಜಿ ವಜಾ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿ ಪುತ್ತೂರು ಉಪ ವಿಭಾಗಾಧಿಕಾರಿ ಹೊರಡಿಸಿದ್ದ ಆದೇಶ ಪ್ರಶ್ನಿಸಿ ಮಹೇಶ್ ಶೆಟ್ಟಿ ತಿಮರೋಡಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.

ಪುತ್ತೂರು ವಿಭಾಗಾಧಿಕಾರಿ ಸ್ಟೆಲ್ಲಾ ವರ್ಗೀಸ್ ಅವರು 2026ರ ಮಾ.13ರಂದು ಹೊರಡಿಸಿರುವ ಆದೇಶ ಪ್ರಶ್ನಿಸಿ ಮಹೇಶ್ ಶೆಟ್ಟಿ ತಿಮರೋಡಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಪೂರ್ಣಗೊಳಿಸಿ ಕಾಯ್ದಿರಿಸಿದ್ದ ತೀರ್ಪನ್ನು ನ್ಯಾಯಮೂರ್ತಿ ಸಚಿನ್ ಶಂಕರ್ ಮಗದುಂ ಅವರಿದ್ದ ಏಕಸದಸ್ಯ ನ್ಯಾಯಪೀಠ ಗುರುವಾರ ಪ್ರಕಟಿಸಿತು.

ಅರ್ಜಿಯು ಊರ್ಜಿತವಾಗುವುದಿಲ್ಲ ಎಂದಿರುವ ನ್ಯಾಯಾಲಯ, ಗಡಿಪಾರು ಆದೇಶ ಪ್ರಶ್ನಿಸಿ ಗೃಹ ಕಾರ್ಯದರ್ಶಿಗೆ ತಿಮರೋಡಿ ಮೇಲ್ಮನವಿ ಸಲ್ಲಿಸಬಹುದು ಎಂದು ತಿಳಿಸಿತಲ್ಲದೆ, ಎರಡು ವಾರ ಗಡಿಪಾರು ಸಂಬಂಧ ಕ್ರಮ ಕೈಗೊಳ್ಳದಂತೆ ಸರ್ಕಾರಕ್ಕೆ ನಿರ್ದೇಶಿಸಿದೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article