ಕನ್ನಡ ಕೇವಲ ಒಂದು ಭಾಷೆಯಲ್ಲ ಅದು ನಮ್ಮ ಅಸ್ತಿತ್ವ ಅದು ಒಂದು ಸಂಸ್ಕೃತಿ: ಪ್ರೊ. ಹೆಚ್.ಎನ್. ಆಂಜನೇಯಪ್ಪ
ಅವರು ಕರ್ನಾಟಕ ಸಾಮಾಜಿಕ ಸಾಂಸ್ಕೃತಿಕ ಅಭೀವೃದ್ಧಿ ಪ್ರತಿಷ್ಠಾನವು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದೊಂದಿಗೆ ಮಂಗಳೂರು ಪುರಭವನದಲ್ಲಿ ಆಯೋಜಿಸಿದ್ದ ಕನ್ನಡ ಝೇಂಕಾರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಈ ಕಾರ್ಯಕ್ರಮವು ವಿಶೇಷವಾಗಿ ವಿದ್ಯಾರ್ಥಿಗಳು ಮತ್ತು ಕನ್ನಡದ ಬಗ್ಗೆ ಆಸಕ್ತಿ ಗೌರವ ಮತ್ತು ಅಭಿಮಾನವನ್ನು ಬೆಳೆಸಲು ಸಹಕಾರಿಯಾಗಿದೆ. ಇಂದಿನ ತಂತ್ರಜ್ಞಾನದಲ್ಲಿ ನಾವು ಇಂಗ್ಲಿಷ್ ಮತ್ತು ಇತರ ಭಾಷೆಗಳೊಂದಿಗೆ ಮುಂದೆ ಸಾಗುತ್ತಿದ್ದರು ತಮ್ಮ ತಾಯಿ ಭಾಷೆಯನ್ನು ಮರೆಯಬಾರದು. ಕನ್ನಡವನ್ನು ದಿನನಿತ್ಯ ಜೀವನದಲ್ಲಿ ಬಳಸುವುದರಿಂದ ಮಾತ್ರ ಅದು ಜೀವಂತವಾಗಿರುತ್ತದೆ. ಇಂದಿನ ತಂತ್ರಜ್ಞಾನದಲ್ಲಿ ನಾವು ನಮ್ಮ ಭಾಷೆಯನ್ನು ಮರೆಯದೆ ಅದನ್ನು ಉಳಿಸಿ ಬೆಳೆಸುವುದು ಬಹಳ ಮುಖ್ಯ ಮನೆಗಳಲ್ಲಿ ಶಾಲೆಗಳಲ್ಲಿ ಸಾರ್ವಜನಿಕ ಜೀವನದಲ್ಲಿ ಕನ್ನಡವನ್ನು ಹೆಚ್ಚು ಹೆಚ್ಚು ಬಳಸುವ ಮೂಲಕ ನಾವು ಅದನ್ನು ಜೀವಂತವಾಗಿಡಬಹುದು ಎಂದರು.
ಇದೇ ಸಂದರ್ಭದಲ್ಲಿ ತನ್ನ ವಿಶ್ರಾಂತ ಜೀವನದಲ್ಲೂ ಶಾಲಾ ಮಕ್ಕಳ ಬುದ್ಧಿಮತ್ತೆಯನ್ನು ವೃದ್ಧಿಸಲು 1,400ಕ್ಕೂ ಹೆಚ್ಚು ಉಪನ್ಯಾಸ ನೀಡಿರುವ/ನೀಡುತ್ತಿರುವ ಬೆಂಗಳೂರಿನ ಓಂಕಾರಪ್ರಿಯ ಬಾಗೇಪಲ್ಲಿ ಅವರಿಗೆ ಕೆಎಸ್‌ಎಸ್‌ಎಪಿ ಕನ್ನಡ ಕಣ್ಮಣಿ ಪ್ರಶಸ್ತಿ ಹಾಗೂ ಮಂಗಳೂರಿನ ಸೌಂಡ್ ಇಂಜಿನಿಯರ್ ಗಣೇಶ್ ಬಂಗೇರ ಇವರಿಗೆ ಸೂಪರ್ ಸೌಂಡ್ ಮಾಸ್ಟರ್ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಸಾಹಿತಿ ಅಕ್ಷಯ ಶೆಟ್ಟಿ ಅಧ್ಯಕ್ಷತೆಯಲ್ಲಿ ನಡೆದ ಕವಿಗೋಷ್ಠಿಯಲ್ಲಿ ಆಯಿಷಾ ಪೆರ್ನೆ, ಮೂಗಪ್ಪ ಗಾಳೇರ, ಆಕೃತಿ ಐ.ಎಸ್. ಭಟ್, ತನ್ಸೀರಾ ಆತೂರು, ಸುಲೋಚನಾ ನವೀನ್ ಕೊಟ್ಟಾರ, ನಿರೀಕ್ಷಿತಾ ಮಂಗಳೂರು, ರಶ್ಮಿ ಸನಿಲ್, ಸುಖಲತ ಶೆಟ್ಟಿ. ರೇಖಾ ಸುದೇಶ್ ರಾವ್, ವ. ಉಮೇಶ್ ಕಾರಂತ, ಅನಿತಾ ಶೆಣೈ, ಎಂ.ಎ. ಮುಸ್ತಫಾ ಬೆಳ್ಳಾರೆ, ಓಂಕಾರಪ್ರಿಯ ಬಾಗೇಪಲ್ಲಿ, ಮುಂತಾದ ಕವಿಗಳು ತಮ್ಮ ಸ್ವರಚಿತ ಕವನ ವಾಚಿಸಿದರು.