ಕನ್ನಡ ಸಾಹಿತ್ಯ ಪರಿಷತ್ ಕನ್ನಡ ಭಾಷೆ, ಸಾಹಿತ್ಯದ ಅಭಿವೃದ್ಧಿಗೆ ನಿರಂತರ ಶ್ರಮಿಸುತ್ತಿದೆ: ಡಾ. ಎಂ.ಪಿ. ಶ್ರೀನಾಥ

ಕನ್ನಡ ಸಾಹಿತ್ಯ ಪರಿಷತ್ ಕನ್ನಡ ಭಾಷೆ, ಸಾಹಿತ್ಯದ ಅಭಿವೃದ್ಧಿಗೆ ನಿರಂತರ ಶ್ರಮಿಸುತ್ತಿದೆ: ಡಾ. ಎಂ.ಪಿ. ಶ್ರೀನಾಥ


ಮಂಗಳೂರು: ಕನ್ನಡ ಸಾಹಿತ್ಯ ಪರಿಷತ್ತು ದೇಶದಲ್ಲಿಯೇ ಅತ್ಯಂತ ವ್ಯವಸ್ಥಿತವಾಗಿ ರಚನೆಯಾದ ಸಂಸ್ಥೆಯಾಗಿದ್ದು, ಕನ್ನಡ ಭಾಷೆ, ಸಾಹಿತ್ಯದ ಅಭಿವೃದ್ಧಿಗೆ ನಿರಂತರ ಶ್ರಮಿಸುತ್ತಿದೆ. ವಿದ್ಯಾರ್ಥಿಗಳು ಸಾಹಿತ್ಯ ಪರಿಷತ್ತಿನ ಕಾರ್ಯಕ್ರಮಗಳ ಸದುಪಯೋಗಪಡಿಸಿಕೊಳ್ಳುವುದರ ಮೂಲಕ ಸಾಹಿತ್ಯಾಭಿರುಚಿಯನ್ನು ಬೆಳೆಸಿಕೊಳ್ಳಬೇಕೆಂದು ದಕ್ಷಿಣಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ. ಎಂ.ಪಿ. ಶ್ರೀನಾಥ ಹೇಳಿದರು.

ಅವರು ದಕ್ಷಿಣಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮಂಗಳೂರು ಹಾಗೂ ಶ್ರೀ ವೆಂಕಟರಮಣಸ್ವಾಮೀ ಮಹಾವಿದ್ಯಾಲಯ, ಬಂಟ್ವಾಳ ಇವರ ಸಂಯುಕ್ತಾಶ್ರಯದಲ್ಲಿ ನಡೆದ ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪನಾ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು.

ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಮಹಾಬಲೇಶ್ವರ ಹೆಬ್ಬಾರ್ ಮಾತನಾಡಿ, ಭಾಷೆ ಇತಿಹಾಸವನ್ನು ಕೊಂಡೊಯ್ಯುವ ಪ್ರವಾಹವಿದ್ದಂತೆ ಎನ್ನುತ್ತಾ ಕನ್ನಡ ಸಾಹಿತ್ಯ ಪರಿಷತ್ತಿನ ಸ್ಥಾಪನೆಗೆ ಕಾರಣರಾದ ಮೈಸೂರಿನ ನಾಲ್ವಡಿ ಕೃಷ್ಣರಾಜ ಒಡೆಯರ್, ದಿವಾನರಾಗಿದ್ದ ಸರ್.ಎಂ. ವಿಶ್ವೇಶ್ವರಯ್ಯ ಹಾಗೂ ಸರ್ ಮಿರ್ಜಾ ಇಸ್ಮಾಯಿಲ್‌ರವರ ಕೊಡುಗೆಗಳನ್ನು ತಿಳಿಸಿದರು.

ಎಸ್.ವಿ.ಎಸ್. ಕಾಲೇಜಿನ ಪ್ರಾಂಶುಪಾಲ ಪ್ರೊ. ಎಂ.ಡಿ. ಮಂಚಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಕನ್ನಡ ಸಾಹಿತ್ಯ ಪರಿಷತ್ತು ಕನ್ನಡ ಭಾಷೆಯ ಉಳಿವು ಹಾಗೂ ಅಭಿವೃದ್ಧಿಗೆ ತನ್ನದೇ ಆದ ಕೊಡುಗೆಯನ್ನು ನೀಡಿದೆ. ಈ ಸಂಸ್ಥೆಯು ಯಾವುದೇ ಪ್ರಚಾರ ಬಯಸದೇ ಸಾಹಿತ್ಯ ಪ್ರಚಾರಕ್ಕೆ ಅವಿರತ ಶ್ರಮಿಸುತ್ತಿದೆ ಎಂದು ಹೇಳಿದರು.

ಬಂಟ್ವಾಳ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ವಿಶ್ವನಾಥ ಬಂಟ್ವಾಳ, ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ನ ಕಾರ್ಯಕಾರಿ ಸದಸ್ಯ ಪೂವಪ್ಪ ನೇರಳೆಕಟ್ಟೆ ಉಪಸ್ಥಿತರಿದ್ದರು. 

ಕನ್ನಡ ವಿಭಾಗದ ಮುಖ್ಯಸ್ಥ ಶಿವಣ್ಣಪ್ರಭು ಸ್ವಾಗತಿಸಿ, ರಸಾಯನ ಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ಸುಯೋಗವರ್ಧನ್ ಡಿ.ಎಮ್. ವಂದಿಸಿದರು. ಸಂಸ್ಕೃತ ವಿಭಾಗದ ಮುಖ್ಯಸ್ಥ ಡಾ.ಕಾಶೀನಾಥ ಶಾಸ್ತ್ರಿ ಹೆಚ್.ವಿ. ನಿರೂಪಿಸಿದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article