ಬೀದಿ ಬದಿ ವ್ಯಾಪಾರಸ್ಥರಿಗೆ ಸಾಲ ಸೌಲಭ್ಯದ ಅರಿವು ಮೂಡಿಸಲು ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ. ಸೂಚನೆ

ಬೀದಿ ಬದಿ ವ್ಯಾಪಾರಸ್ಥರಿಗೆ ಸಾಲ ಸೌಲಭ್ಯದ ಅರಿವು ಮೂಡಿಸಲು ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ. ಸೂಚನೆ


ಮಂಗಳೂರು: ಕೌಶಲ್ಯ ಅಭಿವೃದ್ಧಿ ಯೋಜನೆಗಳನ್ನು ಅನುಷ್ಠಾನಗೊಳಿಸಲು ಸಂಬಂಧಪಟ್ಟ ಅಧಿಕಾರಿಗಳು ಕ್ರಮವಹಿಸಬೇಕು ಎಂದು ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ. ಸೂಚಿಸಿದ್ದಾರೆ.

ಅವರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಜಿಲ್ಲಾ ಕೌಶಲ್ಯ ಮಿಷನ್ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಯುವಕರಿಗೆ ಕೌಶಲ್ಯಾಭಿವೃದ್ಧಿ  ತರಬೇತಿ ನೀಡುವುದರಿಂದ ಸ್ವಯಂ ಉದ್ಯೋಗ ಕಲ್ಪಿಸಿಕೊಳ್ಳಲು ಸಹಾಯವಾಗುತ್ತದೆ. ದೇಶದ ಯುವಜನತೆಯನ್ನು ಉದ್ಯೋಗ-ಸಂಬಂಧಿತ ತರಬೇತಿಯ ಮೂಲಕ ಸಬಲೀಕರಣಗೊಳಿಸಬೇಕು ಎಂದು ಅವರು ಹೇಳಿದರು. ಪಿಎಮ್ ಸ್ವನಿದಿ ಮತ್ತು ನಿಪುಣ್ ಯೋಜನೆಯು  ಮಹತ್ವಾಕಾಂಕ್ಷೆ ಯೋಜನೆಯಾಗಿದ್ದು, ಸಣ್ಣ ವ್ಯಾಪಾರಿಗಳ ಮತ್ತು ಯುವಜನರ ಸಬಲೀಕರಣಕ್ಕೆ ಸಹಾಯ ಮಾಡುತ್ತದೆ ಎಂದರು.  

ಪ್ರಧಾನಮಂತ್ರಿ ಆತ್ಮ ನಿರ್ಭರ್ ನಿಧಿ (ಪಿಎಮ್ ಸ್ವನಿಧಿ) ಯೋಜನೆಯು ಜೂನ್ 2020ರಲ್ಲಿ ಪ್ರಾರಂಭಿಸಲ್ಪಟ್ಟಿದ್ದು, ಈ ಯೋಜನೆಯಡಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿಯ ಬೀದಿ ಬದಿ ವ್ಯಾಪಾರಸ್ಥರಿಗೆ ಸಾಲ ಸೌಲಭ್ಯವನ್ನು ಕಲ್ಪಿಸುವ ನಿಟ್ಟಿನಲ್ಲಿ ಈ ಯೋಜನೆಯ ಕುರಿತು ಫಲಾನುಭವಿಗಳಿಗೆ ಅರಿವು ಮೂಡಿಸಬೇಕು ಎಂದು ಅವರು  ಹೇಳಿದರು.

ಪ್ರಸ್ತುತ ಕೇಂದ್ರ ಸರಕಾರದಿಂದ ಪಿಎಮ್ ಸ್ವನಿಧಿ ಯೋಜನೆಯನ್ನು ಪುನರ್ ರಚಿಸಿ ಮಾರ್ಚ್ 2030 ರವರೆಗೆ ವಿಸ್ತರಿಸಿ, ಅನುಮೋಧಿಸಲಾಗಿರುತ್ತದೆ. ಆರ್ಥಿಕ ಸೇರ್ಪಡೆ ಹೆಚ್ಚಿಸುವುದು, ಡಿಜಿಟಲ್ ವಹಿವಾಟು ಹೆಚ್ಚಿಸಲು ಉತ್ತೇಜಿಸುವುದು., ಸಾಮಥ್ರ್ಯ ಅಭಿವೃದ್ಧಿ ಮತ್ತು ಬೀದಿ ಬದಿ ವ್ಯಾಪಾರಿಗಳು ಮತ್ತು ಅವರ ಅವಲಂಬಿತ ಕುಟುಂಬ ಸದಸ್ಯರಿಗೆ ಸಾಮಾಜಿಕ ಭದ್ರತಾ ಯೋಜನೆಗಳ ಸೌಲಭ್ಯ ಕಲ್ಪಿಸುವುದು ಈ ಯೋಜನೆಯ ಪ್ರಮುಖ ಉದ್ದೇಶಗಳಾಗಿರುತ್ತದೆ. 

ಪಿ.ಎಮ್ ಸ್ವನಿಧಿ ಯೋಜನೆಯನ್ನು ಹೆಚ್ಚಿನ ಪ್ರದೇಶಗಳಿಗೆ ತಲುಪಿಸುವ ನಿಟ್ಟಿನಲ್ಲಿ, ಜನಗಣತಿ ಪಟ್ಟಣಗಳು, ಶಾಸನಬದ್ಧ ಪಟ್ಟಣಗಳು ಮತ್ತು ಅರೆ ನಗರ ಪ್ರದೇಶಗಳು ಇತ್ಯಾದಿಗಳನ್ನು ಹಂತ-ಹಂತವಾಗಿ ಸೇರ್ಪಡಿಸಿಕೊಂಡು ವಿಸ್ತರಿಸಲು ಉದ್ದೇಶಿಸಲಾಗಿರುತ್ತದೆ. ಅದರಂತೆ ಪಿ.ಎಮ್ ಸ್ವನಿಧಿ ಯೋಜನೆಯ ಮೊದಲನೆಯ, ಎರಡನೇಯ ಮತ್ತು ಮೂರನೆಯ ಹಂತದ ಕಿರು ಸಾಲ ಸೌಲಭ್ಯ ಒದಗಿಸಲು ಪರಿಷ್ಕ್ರತ ಗುರಿಯನ್ನು ನಿಗದಿಪಡಿಸಲಾಗಿದ್ದು, ನಿಗದಿತ ಮಾರ್ಗಸೂಚಿಗಳ ಅನುಸಾರ ಅನುಷ್ಠಾನಗೊಳಿಸಬೇಕಾಗಿರುತ್ತದೆ ಎಂದು  ಅಧಿಕಾರಿಗಳು ಸಭೆಗೆ ತಿಳಿಸಿದರು. 

ದಕ್ಷಿಣ ಕನ್ನಡ ಜಿಲ್ಲೆಯ ವ್ಯಾಪ್ತಿಯೊಳಗಡೆ 23 ಜನಗಣತಿ ಪಟ್ಟಣಗಳಲ್ಲಿ ಪಿಎಮ್ ಸ್ವನಿದಿ ಯೋಜನೆ ಅನುಷ್ಠಾನ ಕೈಗೊಳ್ಳಲು, ತಾಲೂಕು ಪಂಚಾಯತ್  ಕಾರ್ಯನಿರ್ವಹಣಾಧಿಕಾರಿ ಇವರ ಮುಖಾಂತರ ಎಲ್ಲಾ 23 ಗ್ರಾಮ ಪಂಚಾಯತ್ನಲ್ಲಿ ಕಾರ್ಯನಿರ್ವಹಿಸುತ್ತಿರುವ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮತ್ತು ಎನ್.ಆರ್.ಎಲ್.ಎಂ ಸಿಬ್ಬಂದಿಯವರಿಗೆ ನಿರ್ದೇಶನ ಮತ್ತು ಸೂಚನೆಗಳನ್ನು ನೀಡುವಂತೆ ಜಿಲ್ಲಾಧಿಕಾರಿಗಳು ಸಭೆಯಲ್ಲಿ ತಿಳಿಸಿದರು.

ದ.ಕ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಜಯಲಕ್ಷ್ಮಿ ರಾಯಕೋಡ, ಜಿಲ್ಲಾ ಕೌಶಲಾಭಿವೃದ್ಧಿ ಅಧಿಕಾರಿ ಪ್ರದೀಪ್ ಡಿ’ಸೋಜ ಉಪಸ್ಥಿತರಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article