ಕುಡಿಯುವ ನೀರಿನ ಸಮಸ್ಯೆ: ಪ್ರತ್ಯೇಕ ಸಭೆಗೆ ಶಾಸಕ ಡಾ.ವೈ. ಭರತ್ ಶೆಟ್ಟಿ ನಿರ್ದೇಶನ
ಮಂಗಳೂರು: ಗುರುಪುರ- ಕೈಕಂಬ ಭಾಗದಲ್ಲಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯಿಂದಾಗಿ ಗುರುಪುರ, ಗಂಜಿಮಠ, ಅದ್ಯಪಾಡಿ, ಕಂದಾವರ, ಪಡುಪೆರಾರ ಮೊದಲಾದ ಕಡೆ ನೀರಿನ ಸಮಸ್ಯೆ ಇರುವುದರಿಂದ ಅಗತ್ಯ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿ ಉಪಸ್ಥಿತಿಯಲ್ಲಿ ಮಂಗಳೂರು ತಾಲೂಕು ಪಂಚಾಯತ್ ವ್ಯಾಪ್ತಿಯ ಪ್ರತ್ಯೇಕ ಸಭೆಗೆ ಶಾಸಕ ಡಾ.ವೈ. ಭರತ್ ಶೆಟ್ಟಿ ನಿರ್ದೇಶನ ನೀಡಿದರು.
ಮಂಗಳೂರು ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಮಂಗಳವಾರ ತ್ರೈಮಾಸಿಕ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಗುರುಪುರ ಭಾಗದಲ್ಲಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಯುತ್ತಿದ್ದು, ಅಲ್ಲಿ ನೀರಿನ ಪೈಪ್ ಅಳವಡಿಕೆಗೆ ಯುಟಿಲಿಟಿ ವ್ಯವಸ್ಥೆಯನ್ನು ಮಾಡಲಾಗಿಲ್ಲ. ಪಂಚಾಯತ್ ವತಿಯಿಂದ ಕ್ರಮ ವಹಿಸಲು ಸಾಧ್ಯವಾಗುತ್ತಿಲ್ಲ. ಇದರಿಂದ ಆ ಭಾಗದ ಕೆಲ ಕಡೆ ನೀರಿನ ಸಮಸ್ಯೆ ಎದುರಾಗಿದೆ ಎಂದು ನೀರು ಪೂರೈಕೆ ವಿಭಾಗದ ಇಂಜಿನಿಯರ್ ಸಭೆಗೆ ಮಾಹಿತಿ ನೀಡಿದರು.
ಇದಕ್ಕೆ ಪ್ರತಿಕ್ರಿಯಿಸಿದ ಶಾಸಕರು, ಯಾವುದೇ ಸಮಸ್ಯೆ ಇದ್ದರೂ ಅದನ್ನು ಬಗೆಹರಿಸಿ ಸಾರ್ವಜನಿಕರಿಗೆ ನೀರು ಕೊಡುವುದು ನಮ್ಮ ಕರ್ತವ್ಯ. ಈ ಬಗ್ಗೆ ಜಿಲ್ಲಾಧಿಕಾರಿ ಗಮನಕ್ಕೆ ತರಲಾಗಿದೆ ಎಂದು ಅವರು, ಸಮಸ್ಯೆ ಬಗೆಹರಿಸಲು ಕ್ರಮ ವಹಿಸಬೇಕಿದೆ ಎಂದರು.
ಗುರುಪುರ, ಮುತ್ತೂರು, ಮುಚ್ಚೂರು, ಉಳಾಯಿಬೆಟ್ಟು, ಬಡಗ ಎಡಪದವು, ಎಡಪದವು ಗ್ರಾಪಂಗಳಿಗೆ ಬಹು ಗ್ರಾಮ ಕುಡಿಯುವ ನೀರು ಸರಬರಾಜು ಮಾಡಲಾಗುತ್ತಿದ್ದು, ಬೇಸಿಗೆ ಕಾಲದಲ್ಲಿ ನೀರಿನ ಅಭಾವ ಇರು
ಕಲಿಕಾ ಪದ್ಧತಿ ಮೇಲ್ದರ್ಜೆಗೇರಿಸಿ..
ಪ್ರಸಕ್ತ ಸಾಲಿನ ಎಸೆಸೆಲ್ಸಿ ಮತ್ತು ಪಿಯುಸಿಯಲ್ಲಿ ಮಂಗಳೂರು ತಾಲೂಕು ಮಟ್ಟದಲ್ಲಿಯೂ ಉತ್ತಮ ಫಲಿತಾಂಶ ಪಡೆದಿರುವ ಬಗ್ಗೆ ಇಲಾಖಾ ಅಧಿಕಾರಿ ಸಿಬ್ಬಂದಿಯನ್ನು ಅಭಿನಂದಿಸಿದ ಶಾಸಕ ಭರತ್ ಶೆಟ್ಟಿ, ಈ ಫಲಿತಾಂಶದಿಂದ ರಿಲ್ಯಾಕ್ಸ್ ಆಗದೆ ಕಲಿಕಾ ಪದ್ಧತಿಯನ್ನು ಮತ್ತಷ್ಟು ಮೇಲ್ದರ್ಜೆಗೇರಿಸಿಕೊಂಡು ಅನುತ್ತೀರ್ಣರಾಗಿರುವ ಮಕ್ಕಳಿಗೆ ಯಾವುದೇ ರೀತಿಯ ಅಂಜಿಕೆ ಬಾರದ ರೀತಿಯಲ್ಲಿ ಅವರನ್ನು ಮುಂದಿನ ಪರೀಕ್ಷೆಗೆ ಸಿದ್ಧಗೊಳಿಸಿ ಉತ್ತೀರ್ಣರನ್ನಾಗಿಸಲು ಸಹಕರಿಸಬೇಕು ಎಂದರು.