ವಿದ್ಯುತ್ ಬ್ಯಾಟರಿ ಚಾಲಿತ ವೀಲ್‌ಚೇರ್ ವಿತರಣೆ
Tuesday, May 5, 2026
ಮಂಗಳೂರು: ಮಂಗಳೂರು ತಾಲೂಕು ಪಂಚಾಯತ್‌ನ 2025-26ನೇ ಸಾಲಿನ ಅನಿರ್ಬಂಧಿತ ಅನುದಾನದಡಿ ವಿಕಲಚೇತನರಿಗೆ ಮೀಸಲಿಟ್ಟ ಯೋಜನೆಯಂತೆ, ತಾಲೂಕು ವ್ಯಾಪ್ತಿಯ ಮೂರು ಅರ್ಹ ಫಲಾನುಭವಿಗಳಿಗೆ ಸುಧಾರಿತ ತಂತ್ರಜ್ಞಾನ ಹೊಂದಿರುವ ವಿದ್ಯುತ್ ಬ್ಯಾಟರಿ ಚಾಲಿತ ವೀಲ್‌ಚೇರ್‌ಗಳನ್ನು ಶಾಸಕ ಡಾ. ಭರತ್ ಶೆಟ್ಟಿ ವೈ ಹಸ್ತಾಂತರಿಸಿದರು.
ತಾಲೂಕು ಪಂಚಾಯತ್ ಆಡಳಿತಾಧಿಕಾರಿ ಶಕುಂತಲಾ ಶೆಣೈ, ಕಾರ್ಯನಿರ್ವಾಹಕ ಅಧಿಕಾರಿ ಮಹೇಶ್ ಕುಮಾರ್ ಹೊಳ್ಳ, ತಾಲೂಕು ಯೋಜನಾಧಿಕಾರಿ ಸುಕನ್ಯಾ ರಾವ್ ಮತ್ತಿತರರು ಉಪಸ್ಥಿತರಿದ್ದರು.