ಆಳ್ವಾಸ್‌ನಲ್ಲಿ ಮೇ 23ರಂದು ಯೋಗ ಮಹೋತ್ಸವ

ಆಳ್ವಾಸ್‌ನಲ್ಲಿ ಮೇ 23ರಂದು ಯೋಗ ಮಹೋತ್ಸವ

ಮೂಡುಬಿದಿರೆ: ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಪೂರ್ವಭಾವಿಯಾಗಿ ಆಳ್ವಾಸ್ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ಕಾಲೇಜಿನವತಿಯಿಂದ ಭಾರತ ಸರ್ಕಾರದ ಆಯುಷ್ ಸಚಿವಾಲಯದ ಮೊರಾರ್ಜಿ ದೇಸಾಯಿ ರಾಷ್ಟ್ರೀಯ ಯೋಗ ಸಂಸ್ಥೆಯ ಸಹಯೋಗದಲ್ಲಿ “ಯೋಗ ಮಹೋತ್ಸವ” ಕಾರ್ಯಕ್ರಮವನ್ನು ಮೇ 23ರಂದು ಮಿಜಾರಿನ ಕಾಲೇಜಿನ ಆವರಣದಲ್ಲಿ ಆಯೋಜಿಸಲಾಗಿದೆ.

ಆರೋಗ್ಯ, ಜ್ಞಾನ ಮತ್ತು ವಿಶ್ವಶಾಂತಿಗಾಗಿ ಯೋಗ” ಎಂಬ ಮಹತ್ವದ ಆಶಯದೊಂದಿಗೆ ನಡೆಯಲಿರುವ ಈ ಕಾರ್ಯಕ್ರಮವು ಯೋಗದ ಮೂಲಕ ದೈಹಿಕ, ಮಾನಸಿಕ ಆರೋಗ್ಯ ವೃದ್ಧಿಗೆ ಉತ್ತೇಜನ ನೀಡುವ ಉದ್ದೇಶ ಹೊಂದಿದೆ. ಸುಮಾರು 500ಕ್ಕೂ ಹೆಚ್ಚು ಯೋಗಾಸಕ್ತರು, ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗವಹಿಸುವ ನಿರೀಕ್ಷೆಯಿದೆ.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಆಳ್ವಾ ಫಾರ್ಮಸಿಯ ವ್ಯವಸ್ಥಾಪಕ ನಿರ್ದೇಶಕಿ ಡಾ. ಗ್ರೀಷ್ಮಾ ವಿವೇಕ್ ಆಳ್ವ ಭಾಗವಹಿಸಲಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article