ಬನ್ನಡ್ಕದಲ್ಲಿ ಸವೀ೯ಸ್ ರಸ್ತೆ ಕಾಮಗಾರಿಗೆ ಚಾಲನೆ: ಶಾಸಕ ಕೋಟ್ಯಾನ್ ಪರಿಶೀಲನೆ
ಸಂಸದ ಬ್ರಿಜೇಶ್ ಚೌಟ ಅವರು ಬನ್ನಡ್ಕ ಪ್ರದೇಶದಲ್ಲಿ ಅಪೂಣ೯ವಾಗಿರುವ ಸವೀ೯ಸ್ ರಸ್ತೆ ನಿಮಾ೯ಣ ಕಾಮಗಾರಿಯನ್ನು ತಕ್ಷಣ ಕೈಗೆತ್ತಿಕೊಳ್ಳುವಂತೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರಿಗೆ ಮೇ. 16 ರಂದು ಪತ್ರ ಬರೆದು ವಿನಂತಿಸಿದ್ದರು.
ಸವೀ೯ಸ್ ರಸ್ತೆ ಕಾಮಗಾರಿ ಗುರುವಾರದ ವರೆಗೆ ಆರಂಭಗೊಳ್ಳದ ಹಿನ್ನಲೆಯಲ್ಲಿ ಊರವರು ಸರ್ವಿಸ್ ರಸ್ತೆ ನಿರ್ಮಾಣಕ್ಕೆ ಒತ್ತಾಯಿಸಿ ಮೇ 31ರಂದು ಪ್ರತಿಭಟನೆ ನಡೆಸುವ ಎಚ್ಚರಿಕೆ ನೀಡಿದ್ದರು.
ಈ ಹಿನ್ನೆಲೆಯಲ್ಲಿ ಗುತ್ತಿಗೆ ವಹಿಸಿಕೊಂಡಿರುವ ಡಿ ಬಿ ಎಲ್ ಸಂಸ್ಥೆಯ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ ಸರ್ವಿಸ್ ರಸ್ತೆ ನಿರ್ಮಾಣಕ್ಕೆ ಬೇಕಾದ ಕ್ರಮ ಕೈಗೊಂಡಿದ್ದಾರೆ. ರಸ್ತೆ ಬದಿಗಳಲ್ಲಿರುವ ಜಾಗವನ್ನು ವಶಕ್ಕೆ ಪಡೆದುಕೊಂಡು ರಸ್ತೆ ನಿರ್ಮಾಣಕ್ಕೆ ಬೇಕಾದಂತೆ ಜಾಗ ಸಮತಟ್ಟುಗೊಳಿಸುವ ಕಾರ್ಯ ಆರಂಭಿಸಿದ್ದಾರೆ. ಈ ಕಾಮಗಾರಿಯನ್ನು ಶಾಸಕ ಉಮಾನಾಥ ಕೋಟ್ಯಾನ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಶಾಸಕರು ಸ್ಥಳ ಪರಿಶೀಲನೆ ನಡೆಸುವ ಸಂದಭ೯ದಲ್ಲಿ ಪಡುಮಾರ್ನಾಡು ಪಂಚಾಯತ್ ಮಾಜಿ ಅಧ್ಯಕ್ಷ ದಯಾನಂದ ಪೈ, ಬಿಜೆಪಿ ಪ್ರಮುಖರಾದ ಸೂರಜ್ ಜೈನ್, ಗೋಪಾಲ್ ಶೆಟ್ಟಿಗಾರ್, ಬೋಳ ವಿಶ್ವನಾಥ್ ಕಾಮತ್ ಮತ್ತಿತರರು ಭಾಗವಹಿಸಿದ್ದರು.


