ಮೂಡುಬಿದಿರೆಯ ಸರಕಾರಿ ಆಸ್ಪತ್ರೆ ಇನ್ನು ಆಳ್ವಾಸ್ ತೆಕ್ಕೆಗೆ
Saturday, May 16, 2026
ಮೂಡುಬಿದಿರೆ: ಜಿಲ್ಲೆಯಲ್ಲಿ ಸಾರ್ವಜನಿಕರಿಗೆ ಉತ್ತಮ ಆರೋಗ್ಯ ಸೇವೆ ನೀಡುವ ಹಿತದೃಷ್ಟಿಯಿಂದ ಖಾಸಗಿ ಆಸ್ಪತ್ರೆಗಳೊಂದಿಗೆ ಕರಾರು ಒಪ್ಪಂದ ಮಾಡಿಕೊಳ್ಳುವ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತಾಲಯವು ದ.ಕ.ಜಿಲ್ಲಾ ಆರೋಗ್ಯಾಧಿಕಾರಿಯವರಿಗೆ ಸೂಚಿಸಿದ್ದು ಅದರಂತೆ ಮೂಡುಬಿದಿರೆ ಮತ್ತು ಬೆಳ್ತಂಗಡಿ ಸಮುದಾಯ ಆರೋಗ್ಯ ಕೇಂದ್ರಗಳು ಇನ್ನು ಆಳ್ವಾಸ್ ಹೆಲ್ತ್ ಸೆಂಟರ್ ನೊಂದಿಗೆ ಟೈ ಅಪ್ ಆಗಿ ಸರಕಾರಿ & ಖಾಸಗಿ ಜಂಟಿಯಾಗಿ ಒಟ್ಟಿಗೆ ಕಾರ್ಯಾಚರಿಸಲಿದೆ.
ಬಂಟ್ವಾಳ ಸಮುದಾಯ ಆರೋಗ್ಯ ಕೇಂದ್ರವು ಎ.ಜೆ.ಆಸ್ಪತ್ರೆಯೊಂದಿಗೆ ಸೇರಿಕೊಂಡು ಸೇವೆ ನೀಡಲಿದೆ.
ಸರಕಾರವು ಮೂರು ಆಸ್ಪತ್ರೆಗಳನ್ನು ಖಾಸಗಿ ಆಸ್ಪತ್ರೆಗಳ ಮಡಿಲಿಗೆ ಹಾಕಿದೆ.