ಕೆಸರ್ ಗದ್ದೆ: ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಗುದ್ದಿದ ಕಾರು-ಜಖಂ

ಕೆಸರ್ ಗದ್ದೆ: ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಗುದ್ದಿದ ಕಾರು-ಜಖಂ


ಮೂಡುಬಿದಿರೆ: ಮಂಗಳೂರು-ಕಾರ್ಕಳ ರಾಷ್ಟ್ರೀಯ ಹೆದ್ದಾರಿಯ ಬನ್ನಡ್ಕ-ಕೆಸರುಗದ್ದೆ ಮಾರ್ಗದಲ್ಲಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಜಖಂಗೊಂಡಿದೆ. 


ಕಾರು ಕಾಕ೯ಳದಿಂದ ಮೂಡುಬಿದಿರೆ ಕಡೆಗೆ ಬರುತ್ತಿದ್ದಾಗ ಕೆಸರುಗದ್ದೆ ರಸ್ತೆಯಲ್ಲಿ ನೀರು ನಿಂತಿದ್ದರಿಂದ ಚಾಲಕ ತಕ್ಷಣ ಬ್ರೇಕ್ ಹಾಕಿದ ಪರಿಣಾಮ, ಕಾರು ನಿಯಂತ್ರಣ ಕಳೆದುಕೊಂಡು ತಿರುಗಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಕಾರಿನ ಮುಂಭಾಗ ಭಾಗಶಃ ಹಾನಿಯಾಗಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಈ ಮಾರ್ಗದಲ್ಲಿ ನಿರಂತರವಾಗಿ ಅಪಘಾತಗಳು ಸಂಭವಿಸುತ್ತಿರುವುದು ವಾಹನ ಸವಾರರಲ್ಲಿ ಆತಂಕ ಮೂಡಿಸಿದೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article