ಬಿಜೆಪಿ ಮೂಡುಬಿದಿರೆ ಮಂಡಲದ ಒಬಿಸಿ ಮೋಚಾ೯ದ ಸಭೆ
Sunday, May 31, 2026
ಮೂಡುಬಿದಿರೆ: ಭಾರತೀಯ ಜನತಾ ಪಾರ್ಟಿಯ ಮೂಲ್ಕಿ-ಮೂಡುಬಿದಿರೆ ಮಂಡಲದ ಹಿಂದುಳಿದ ವರ್ಗಗಳ ಮೋರ್ಚಾದ ಸಭೆಯು ಪಕ್ಷದ ಕಛೇರಿಯಲ್ಲಿ ಭಾನುವಾರ ನಡೆಯಿತು.
ಮುಲ್ಕಿ-ಮೂಡುಬಿದಿರೆ ಮಂಡಲ ಅಧ್ಯಕ್ಷ ದಿನೇಶ್ ಪುತ್ರನ್ ಅವರ ಅಧ್ಯಕ್ಷತೆಯಲ್ಲಿ ಮೋರ್ಚಾದ ನೂತನ ಪದಾಧಿಕಾರಿಗಳ ಪದಗ್ರಹಣವು ನಡೆಯಿತು.
ಈ ಸಂದಭ೯ದಲ್ಲಿ ಒಬಿಸಿ ಮೋಚಾ೯ದ ನೂತನ ಅಧ್ಯಕ್ಷರಾಗಿ ಪ್ರದೀಪ್ ಕುಮಾರ್ ವಾಲ್ಪಾಡಿ ಅವರನ್ನು ಪುನರ್ ಆಯ್ಕೆ ಮಾಡಲಾಯಿತು.
ಈ ಸಂದಭ೯ದಲ್ಲಿ ಜಿಲ್ಲಾ ಹಿಂದುಳಿದ ವರ್ಗದ ಅಧ್ಯಕ್ಷ ಮಹೇಶ್ ಜೋಗಿ,ಜಿಲ್ಲಾ ಉಪಾಧ್ಯಕ್ಷರಾದ ರಾಘವೇಂದ್ರ ರಾವ್,ವಿನೋದ್ ಸಾಲ್ಯಾನ್,ಜಿಲ್ಲಾ ಹಿಂದುಳಿದ ವರ್ಗ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಶಶಿಧರ್ ಕಲ್ಮಜ,ಮಂಡಲದ ಕೋಶಾಧಿಕಾರಿ ಹಾಗೂ ಮಂಡಲ ಒಬಿಸಿ ಪ್ರಬಾರಿ ಪ್ರಭಾಕರ್ ಕುಲಾಲ್,ಮತ್ತು ಮೂಲ್ಕಿ - ಮೂಡುಬಿದಿರೆ ಮಂಡಲದ ಹಿಂದುಳಿದ ವರ್ಗದ ಪ್ರಧಾನ ಕಾರ್ಯದರ್ಶಿಗಳಾದ ಸಂಪತ್ ಪೂಜಾರಿ ನೆತ್ತೋಡಿ,ಹೇಮಂತ್ ಹಾಗೂ ನೃತನ ಪದಾಧಿಕಾರಿಗಳು ಮತ್ತು ಸದಸ್ಯರೆಲ್ಲರೂ ಹಾಜರಿದ್ದರು.
