ಆಳ್ವಾಸ್ ಹೆಲ್ತ್ ಸೆಂಟರಿನಲ್ಲಿ ಅಂತರರಾಷ್ಟ್ರೀಯ ದಾದಿಯರ ದಿನಾಚರಣೆ

ಆಳ್ವಾಸ್ ಹೆಲ್ತ್ ಸೆಂಟರಿನಲ್ಲಿ ಅಂತರರಾಷ್ಟ್ರೀಯ ದಾದಿಯರ ದಿನಾಚರಣೆ


ಮೂಡುಬಿದಿರೆ: ರೋಗಿಗಳ ನೋವನ್ನು ಹಂಚಿಕೊಂಡು ಅವರಿಗೆ ಮಾನಸಿಕ ಧೈರ್ಯ ನೀಡುವುದು ಹಾಗೂ ಚಿಕಿತ್ಸಾ ಪ್ರಕ್ರಿಯೆಯಲ್ಲಿ ನಿರಂತರ ಬೆಂಬಲ ನೀಡುವುದು ದಾದಿಯರ ಪ್ರಮುಖ ಕರ್ತವ್ಯ ಎಂದು ಕಾರ್ಕಳ ತಾಲೂಕು ಆಸ್ಪತ್ರೆಯ ನರ್ಸಿಂಗ್ ಅಧೀಕ್ಷಕಿ ಕಮಲಾ ಪಿ.ಜೆ. ತಿಳಿಸಿದರು.

ಆಳ್ವಾಸ್ ಹೆಲ್ತ್ ಸೆಂಟರ್ ಹಾಗೂ ಕಾಲೇಜ್ ಆಫ್ ನರ್ಸಿಂಗ್ ಸಹಯೋಗದಲ್ಲಿ ನಡೆದ ಅಂತರರಾಷ್ಟ್ರೀಯ ದಾದಿಯರ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ನರ್ಸಿಂಗ್ ಸಿಬ್ಬಂದಿ ಸದಾ ಕರುಣೆ, ಸಹಾನುಭೂತಿ ಮತ್ತು ಶಿಸ್ತಿನೊಂದಿಗೆ ಕರ್ತವ್ಯ ನಿರ್ವಹಿಸಬೇಕು. ನರ್ಸಿಂಗ್ ವೃತ್ತಿಯು ಅತ್ಯಂತ ಶ್ರೇಷ್ಠ ಹಾಗೂ ಮಾನವೀಯ ಸೇವೆಯ ವೃತ್ತಿಯಾಗಿದ್ದು, ಪ್ರತಿಯೊಬ್ಬ ದಾದಿಯರು ತಮ್ಮ ವೃತ್ತಿಯನ್ನು ಗೌರವದಿಂದ ನಿರ್ವಹಿಸಬೇಕು ಎಂದು ಹೇಳಿದರು.

ಆಳ್ವಾಸ್ ಹೆಲ್ತ್ ಸೆಂಟರ್‌ನ ನರ್ಸಿಂಗ್ ಅಧೀಕ್ಷಕಿ ಜುಲೇಖಾ ಖಾನ್ ಮಾತನಾಡಿ, ಭಾರತದಲ್ಲಿ ನರ್ಸಿಂಗ್ ಕ್ಷೇತ್ರವು ಕಳೆದ ಹಲವು ವರ್ಷಗಳಲ್ಲಿ ಬಹುಬೇಡಿಕೆಯ ವೃತ್ತಿಯಾಗಿದೆ. ಆಧುನಿಕ ಆರೋಗ್ಯ ಸೇವಾ ವ್ಯವಸ್ಥೆಯಲ್ಲಿ ಈ ವೃತ್ತಿಗೆ ಹೆಚ್ಚಿನ ಗೌರವವಿದೆ. ಅಮೆರಿಕ, ಕೆನಡಾ, ಆಸ್ಟ್ರೇಲಿಯಾ ಸೇರಿದಂತೆ ವಿದೇಶಗಳಲ್ಲಿಯೂ ಭಾರತೀಯ ನರ್ಸಿಂಗ್ ವೃತ್ತಿಪರರಿಗೆ ಹೆಚ್ಚಿನ ಬೇಡಿಕೆ ಇದ್ದು, ನಮ್ಮ ದಾದಿಯರು ಸೇವಾ ಮನೋಭಾವದಿಂದ ಉತ್ತಮ ಹೆಸರು ಗಳಿಸಿದ್ದಾರೆ. ಉತ್ತಮ ಶಿಕ್ಷಣ ಹಾಗೂ ಭಾಷಾ ಕೌಶಲ್ಯ ಹೊಂದಿರುವ ವಿದ್ಯಾರ್ಥಿಗಳು ವಿಶ್ವದ ಯಾವುದೇ ಭಾಗದಲ್ಲಿ ಸಾಮರ್ಥ್ಯ ಪ್ರದರ್ಶಿಸಬಹುದು ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಕಾರ್ಕಳ ತಾಲೂಕು ಆಸ್ಪತ್ರೆಯ ನರ್ಸಿಂಗ್ ಅಧೀಕ್ಷಕಿ ಕಮಲಾ ಪಿ.ಜೆ. ಹಾಗೂ ಆಳ್ವಾಸ್ ಹೆಲ್ತ್ ಸೆಂಟರ್‌ನ ಹಿರಿಯ ಶುಶ್ರೂಕಿ ಪುಷ್ಪ ರೈ ಅವರನ್ನು ಸನ್ಮಾನಿಸಲಾಯಿತು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಡಾ. ಹನ ಶೆಟ್ಟಿ, ಆಳ್ವಾಸ್ ಕಾಲೇಜ್ ಆಫ್ ನರ್ಸಿಂಗ್ ಪ್ರಾಚಾರ್ಯ ಡಾ. ಯತಿಕುಮಾರಸ್ವಾಮಿ ಗೌಡ ಉಪಸ್ಥಿತರಿದ್ದರು.

ಸಭಾ ಕಾರ್ಯಕ್ರಮದ ಬಳಿಕ ನರ್ಸಿಂಗ್ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಮನರಂಜನಾ ಆಟಗಳು ನಡೆದವು. ಅಲೆಶ್ಶಿಯಾ ಡಿಸೋಜಾ ಹಾಗೂ ಅರಂಟಾ ರೇನು ಕಾರ್ಯಕ್ರಮ ನಿರೂಪಿಸಿದರು. ನಿಕ್ಸಿ ಎನ್‌ಎಮ್ ವಂದಿಸಿದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article