ಮೂಡುಬಿದಿರೆಯಲ್ಲಿ ಭಿಕ್ಷಾಟನೆ ಮಾಡುತ್ತಿದ್ದ ಈವ೯ರು ನಿರಾಶ್ರಿತರ ಕೇಂದ್ರಕ್ಕೆ
Thursday, May 7, 2026
ಮೂಡುಬಿದಿರೆ: ಇಲ್ಲಿನ ಬಸ್ ನಿಲ್ದಾಣದ ಪರಿಸರದಲ್ಲಿ ಭಿಕ್ಷಾಟನೆ ಮಾಡುತ್ತಿದ್ದ ಈವ೯ರನ್ನು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಮಂಗಳೂರಿನ ನಿರಾಶ್ರಿತರ ಕೇಂದ್ರಕ್ಕೆ ಗುರುವಾರ ಸೇರಿಸಿದ್ದಾರೆ.
ಮೂಡುಬಿದಿರೆ ಬಸ್ ನಿಲ್ದಾಣದ ಬಳಿ ಪೆನ್ನು ಮಾರಾಟ ಮಾಡುವ ಬಾಲಕಾಮಿ೯ಕರು, ಭಿಕ್ಷೆ ಬೇಡುವವರು, ಅನಾರೋಗ್ಯದಿಂದ ಬಸ್ ನಿಲ್ದಾಣದಲ್ಲಿಯೇ ಆಶ್ರಯ ಪಡೆಯುತ್ತಿದ್ದವರ ಬಗ್ಗೆ ಮಾಹಿತಿ ಪಡೆದ ಸಮಾಜ ಕಲ್ಯಾಣ ಇಲಾಖೆ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಿರಾಶ್ರಿತರ ಕೇಂದ್ರದ ಅಧಿಕಾರಿಗಳು, ಸಿಬಂದಿಗಳು ಕಾರ್ಯಾಚರಣೆ ನಡೆಸಿದರು.
ಈ ಸಂದಭ೯ದಲ್ಲಿ ಪೆನ್ನು ಮಾರಾಟ ಮಾಡುತ್ತಿದ್ದ ಮಹಿಳೆಯರು ಮತ್ತು ಮಕ್ಕಳು ತಪ್ಪಿಸಿಕೊಂಡಿದ್ದಾರೆ. ಭಿಕ್ಷೆ ಬೇಡುತ್ತಿದ್ದ ಮಹಿಳೆ ಮತ್ತು ಅನಾರೋಗ್ಯದಿಂದ ಕಳೆದ ಕೆಲವು ದಿನಗಳಿಂದ ಬಸ್ ನಿಲ್ದಾಣದಲ್ಲಿಯೇ ಮಲಗಿದ್ದ ವೃದ್ಧರನ್ನು ವಶಕ್ಕೆ ಪಡೆದುಕೊಂಡು ನಂತರ ಮಂಗಳೂರಿನಲ್ಲಿರುವ ನಿರಾಶ್ರಿತರ ಕೇಂದ್ರಕ್ಕೆ ಸೇರಿಸಿದ್ದಾರೆ.