ಸಂತ ಫಿಲೋಮಿನಾ ಕಾಲೇಜಿನಲ್ಲಿ ಕ್ವಾಂಟಾ 2ಕೆ26 ಭೌತಶಾಸ್ತ್ರ ಉತ್ಸವ

ಸಂತ ಫಿಲೋಮಿನಾ ಕಾಲೇಜಿನಲ್ಲಿ ಕ್ವಾಂಟಾ 2ಕೆ26 ಭೌತಶಾಸ್ತ್ರ ಉತ್ಸವ


ಪುತ್ತೂರು: ಇಲ್ಲಿನ ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ), ಇದರ ಭೌತಶಾಸ್ತ್ರ ವಿಭಾಗದ ವತಿಯಿಂದ ‘ಕ್ವಾಂಟಾ 2ಕೆ26’ ಅಂತರವಿಭಾಗೀಯ ಭೌತಶಾಸ್ತ್ರ ಉತ್ಸವವು ಎಸ್‌ಜೆಎಂ ಸಭಾಂಗಣದಲ್ಲಿ ನಡೆಯಿತು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಉಪಪ್ರಾಂಶುಪಾಲ ಡಾ. ವಿಜಯಕುಮಾರ್ ಎಂ. ಮಾತನಾಡಿ, ವಿದ್ಯಾರ್ಥಿಗಳು ಕೇವಲ ಶೈಕ್ಷಣಿಕ ಸಾಧನೆಗೆ ಮಾತ್ರ ಸೀಮಿತವಾಗದೆ, ಇಂತಹ ಉತ್ಸವಗಳಲ್ಲಿ ಆಯೋಜಿಸಲಾದ ವಿವಿಧ ಚಟುವಟಿಕೆಗಳಲ್ಲಿ ಭಾಗವಹಿಸುವ ಮೂಲಕ ಕೌಶಲ್ಯಾಭಿವೃದ್ಧಿಯನ್ನು ಸಾಧಿಸಬೇಕು, ಇಂತಹ ಚಟುವಟಿಕೆಗಳು ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸವನ್ನು ಬೆಳೆಸಲು ಸಹಕಾರಿಯಾಗುತ್ತವೆ ಎಂದರು.


ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಬಂಟ್ವಾಳದ ಶ್ರೀ ವೆಂಕಟರಮಣ ಸ್ವಾಮಿ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಮತ್ತು ಸಸ್ಯಶಾಸ್ತ್ರ ವಿಭಾಗ ಮುಖ್ಯಸ್ಥ ಡಾ. ವಿನಾಯಕ ಕೆ.ಎಸ್. ಅವರು ವಿದ್ಯಾರ್ಥಿಗಳಲ್ಲಿ ಸೃಜನಾತ್ಮಕ ಚಿಂತನೆ ಬೆಳೆಸುವ ಉದ್ದೇಶದಿಂದ ಆಯೋಜಿಸಲಾದ ಈ ಉತ್ಸವವನ್ನು ಶ್ಲಾಘಿಸಿದರು.

ಭೌತಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ಕೆ. ಚಂದ್ರಶೇಖರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಉತ್ಸವದ ಅಂಗವಾಗಿ ಆಯೋಜಿಸಲಾದ ವಿವಿಧ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಣೆ ನಡೆಯಿತು.

ಸಂಯೋಜಕರಾದ ಪ್ರಾಧ್ಯಾಪಕಿ ಪೂಜಾಶ್ರೀ ವಿ. ರೈ ಹಾಗೂ ವಿಜ್ಞಾನ ವಿಭಾಗದ ಉಪನ್ಯಾಸಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ದ್ವಿತೀಯ ಬಿಎಸ್ಸಿ ವಿದ್ಯಾರ್ಥಿನಿ ಮಾನಸಾ ಹಾಗೂ ತಂಡ ಪ್ರಾರ್ಥಿಸಿ, ವಿದ್ಯಾರ್ಥಿ ಸಂಯೋಜಕ ಎ.ಜೆ. ಆಯಿಷತ್ ಜಬೀನಾ ಸ್ವಾಗತಿಸಿದರು. ಮನೀಶ್ ಬಿ.ಪಿ. ಅತಿಥಿಗಳನ್ನು ಪರಿಚಯಿಸಿ, ಅಶ್ವಿನಿ ಎನ್. ವಂದಿಸಿ, ಸುಷ್ಮಾ ವಾಗ್ಲೆ ಕಾರ್ಯಕ್ರಮ ನಿರೂಪಿಸಿದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article