‘ಹವಾಮಾನ ಸಂಕಷ್ಟ-ಈಗಲೇ ಕ್ರಮ ಕೈಗೊಳ್ಳಬೇಕಿದೆ’: ಅತಿಥಿ ಉಪನ್ಯಾಸ

‘ಹವಾಮಾನ ಸಂಕಷ್ಟ-ಈಗಲೇ ಕ್ರಮ ಕೈಗೊಳ್ಳಬೇಕಿದೆ’: ಅತಿಥಿ ಉಪನ್ಯಾಸ


ಪುತ್ತೂರು: ಇಲ್ಲಿನ ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ) ವತಿಯಿಂದ ಭೌತಶಾಸ್ತ್ರ ವಿಭಾಗದ ಆಶ್ರಯದಲ್ಲಿ ‘ಹವಾಮಾನ ಸಂಕಷ್ಟ: ಈಗಲೇ ಕ್ರಮ ಕೈಗೊಳ್ಳಬೇಕಿದೆ’ ಎಂಬ ವಿಷಯದ ಕುರಿತು ಅತಿಥಿ ಉಪನ್ಯಾಸ ಕಾರ್ಯಕ್ರಮ ನಡೆಯಿತು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಉಪಪ್ರಾಂಶುಪಾಲ ಡಾ. ವಿಜಯಕುಮಾರ್ ಎಂ. ಮಾತನಾಡಿ, ಇತ್ತೀಚಿನ ಹವಾಮಾನ ಬದಲಾವಣೆಗಳು ಹಾಗೂ ಅವುಗಳಿಂದ ಉಂಟಾಗುತ್ತಿರುವ ಸಮಸ್ಯೆಗಳ ಬಗ್ಗೆ ಆತಂಕ ವ್ಯಕ್ತಪಡಿಸಿದರು.


ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಬಂಟ್ವಾಳದ ಶ್ರೀ ವೆಂಕಟರಮಣ ಸ್ವಾಮಿ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಮತ್ತು ಸಸ್ಯಶಾಸ್ತ್ರ ವಿಭಾಗ ಮುಖ್ಯಸ್ಥ ಡಾ. ವಿನಾಯಕ ಕೆ.ಎಸ್. ಮಾತನಾಡಿ, ಬಿಎಸ್ಸಿ ವಿದ್ಯಾರ್ಥಿಗಳಿಗೆ ಹವಾಮಾನ ಸಂಕಷ್ಟದ ಗಂಭೀರತೆ, ಅದರ ಪ್ರಮುಖ ಕಾರಣಗಳು ಹಾಗೂ ಭವಿಷ್ಯದಲ್ಲಿ ಅದನ್ನು ನಿಯಂತ್ರಿಸಲು ಕೈಗೊಳ್ಳಬೇಕಾದ ಕ್ರಮಗಳ ಕುರಿತು ಮಾಹಿತಿ ನೀಡಿ, ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ತಿಳಿಸಿದರು.


ವಿಜ್ಞಾನ ವಿಭಾಗದ ಉಪನ್ಯಾಸಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಭೌತಶಾಸ್ತ್ರ ವಿಭಾಗ ಮುಖ್ಯಸ್ಥ ಡಾ. ಕೆ. ಚಂದ್ರಶೇಖರ್ ನಿರೂಪಿಸಿದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article