ವೇಟ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಅಮೋಘ ಸಾಧನೆ ತೋರಿದ ಸಂತ ಫಿಲೋಮಿನಾ ಕಾಲೇಜಿನ ವಿದ್ಯಾರ್ಥಿಗಳು
Saturday, May 16, 2026
ಪುತ್ತೂರು: ಏಪ್ರಿಲ್ 27 ಮತ್ತು 28 ರಂದು ಆಳ್ವಾಸ್ ಕಾಲೇಜು ಮೂಡಬಿದಿರೆ ಇಲ್ಲಿ ನಡೆದ ಮಂಗಳೂರು ವಿವಿ ಮಟ್ಟದ ಅಂತರ್ ಕಾಲೇಜು ಕ್ರೀಡಾಕೂಟದಲ್ಲಿ ಭಾಗವಹಿಸಿದ ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನ ವಿದ್ಯಾರ್ಥಿಗಳು ಉತ್ತಮ ಪ್ರದರ್ಶನ ನೀಡುವುದರ ಮೂಲಕ ಬಹುಮಾನಕ್ಕೆ ಪಾತ್ರರಾಗಿದ್ದಾರೆ.
ಮಹಿಳೆಯರ ವೇಟ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಕಾಲೇಜಿನ ತೃತೀಯ ಬಿಎಸ್ಸಿ ವಿದ್ಯಾರ್ಥಿನಿ ಸ್ಪಂದನಾ ಕೆ. ಅವರು 48 ಕೆ.ಜಿ. ವಿಭಾಗದಲ್ಲಿ ಪ್ರಥಮ, ದೃಶ್ಯ ಕೆ.ವಿ. 85 ಕೆ.ಜಿ. ವಿಭಾಗದಲ್ಲಿ ದ್ವಿತೀಯ, ಸಿಂಚನ ಬಿ. 77 ಕೆಜಿ ವಿಭಾಗದಲ್ಲಿ ತೃತೀಯ, ಚಮೀಶ ಯು. 63 ಕೆಜಿ ವಿಭಾಗದಲ್ಲಿ ತೃತೀಯ ಸ್ಥಾನವನ್ನು ಪಡೆದಿದ್ದಾರೆ.
ಪುರುಷರ ವಿಭಾಗದ ವೇಟ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ 71 ಕೆ.ಜಿ. ವಿಭಾಗದಲ್ಲಿ ರಿತೇಶ್ ಕೆ.ಐ. ಪ್ರಥಮ, ತೃತೀಯ ಬಿ.ಎ. ವಿದ್ಯಾರ್ಥಿ ರಂಜಿತ್ ಕುಮಾರ್ 110 ಕೆ.ಜಿ. ವಿಭಾಗದಲ್ಲಿ ದ್ವಿತೀಯ ಹಾಗೂ ಅಭಿಜಿತ್ 79 ಕೆ.ಜಿ. ವಿಭಾಗದಲ್ಲಿ ತೃತೀಯ ಸ್ಥಾನವನ್ನು ಪಡೆದಿದ್ದಾರೆ.
ವಿದ್ಯಾರ್ಥಿಗಳ ಸಾಧನೆಗೆ ಕಾಲೇಜಿನ ಪ್ರಾಂಶುಪಾಲರಾದ ರೆ. ಡಾ. ಆಂಟನಿ ಪ್ರಕಾಶ್ ಮೊಂತೆರೋ ಹಾಗೂ ಉಪನ್ಯಾಸಕರು ಹರ್ಷ ವ್ಯಕ್ತಪಡಿಸಿದ್ದಾರೆ.






