ಸಂತ ಫಿಲೋಮಿನಾ ಪ.ಪೂ. ಕಾಲೇಜಿನಲ್ಲಿ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವ
ಈ ಕಾಲೇಜಿನಲ್ಲಿ ಕಲಿತಿರುವ ವಿದ್ಯಾರ್ಥಿಗಳು ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆಗಳನ್ನು ಮಾಡಿದ್ದು, ನೀವು ಕೂಡ ವಿದ್ಯಾಭ್ಯಾಸದಲ್ಲಿ ಯಶಸ್ಸನ್ನು ಪಡೆದು ಸಮರ್ಥ ದೇಶವನ್ನು ಕಟ್ಟುವಲ್ಲಿ ಕೊಡುಗೆಯನ್ನು ನೀಡುವಿರೆಂದು ನಿರೀಕ್ಷಿಸುತ್ತೇನೆ. ಕಾಲೇಜಿನಲ್ಲಿ ಅನುಭವಿ ಪ್ರಾಧ್ಯಾಪಕರ ತಂಡವಿದ್ದು, ನಿಮ್ಮ ಯಶಸ್ಸಿಗೆ ಎಲ್ಲಾ ಪ್ರಾಧ್ಯಾಪಕರು ಶ್ರಮಿಸುತ್ತಾರೆ. ಕಾಲೇಜು ಶಿಕ್ಷಣ ಕೇವಲ ಪುಸ್ತಕದ ಜ್ಞಾನ ಮಾತ್ರವಲ್ಲದೆ, ವಿದ್ಯಾರ್ಥಿಗಳು ಸಾಂಸ್ಕೃತಿಕ ಮತ್ತು ಪಠ್ಯೇತರ ಚಟುವಟಿಕೆಗಳಲ್ಲೂ ಭಾಗವಹಿಸಬೇಕು. ಈ ಕಾಲೇಜಿನಲ್ಲಿ ದೈಹಿಕ ಶಿಕ್ಷಣಕ್ಕೂ ಸಮಾನ ಪ್ರಾಧಾನ್ಯತೆಯನ್ನು ನೀಡುತ್ತೇವೆ. ಎಲ್ಲರೂ ಕಾಲೇಜಿನ ಸೌಕರ್ಯಗಳನ್ನು ಉಪಯೋಗಿಸಿಕೊಂಡು ಉತ್ತಮ ಅಂಕಗಳೊಂದಿಗೆ ಉತ್ತೀರ್ಣರಾಗುವುದಷ್ಟೇ ಅಲ್ಲದೆ, ಜೀವನದಲ್ಲಿ ಯಶಸ್ಸನ್ನು ಸಾಧಿಸಬೇಕೆಂದು ಹಾರೈಸಿದರು.
ಎಸ್.ಎಸ್.ಎಲ್.ಸಿ.ಯಲ್ಲಿ ಅತೀ ಹೆಚ್ಚು ಅಂಕವನ್ನು ಪಡೆದ ವಿದ್ಯಾರ್ಥಿಗಳನ್ನು ಈ ಸಂದರ್ಭದಲ್ಲಿ ಗೌರವಿಸಲಾಯಿತು. ಕಾಲೇಜಿನ ವಾರ್ಷಿಕ ಸಂಚಿಕೆ ‘ಫಿಲೋ ದರ್ಶನ’ ವನ್ನು ಬಿಡುಗಡೆಗೊಳಿಸಲಾಯಿತು.
ಶಿಕ್ಷಕ-ರಕ್ಷಕ ಸಂಘದ ಉಪಾಧ್ಯಕ್ಷೆ ದಿವ್ಯಾ ರೈ ಉಪಸ್ಥಿತರಿದ್ದರು. ಕಾಲೇಜಿನ ಎಲ್ಲಾ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಕಾಲೇಜಿನ ಪ್ರಾಂಶುಪಾಲರಾದ ರೆ. ಫಾ. ಅಶೋಕ್ ರಾಯನ್ ಕ್ರಾಸ್ತಾ ಪ್ರಾಸ್ತಾವಿಕ ನುಡಿಗಳನ್ನಾಡಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಪ್ರದರ್ಶನ ಕಲಾ ಸಂಘದ ವಿದ್ಯಾರ್ಥಿಗಳು ಪ್ರಾರ್ಥಿಸಿ, ಉಪನ್ಯಾಸಕರಾದ ಹರ್ಷಿತ್ ಕುಮಾರ್ ಸ್ವಾಗತಿಸಿ, ಅವಿನಾ ಮಾಡ್ತಾ ವಂದಿಸಿ, ಸುಮಾ ಡಿ. ಕಾರ್ಯಕ್ರಮವನ್ನು ನಿರೂಪಿಸಿದರು.
