ಬಂಟಕಲ್ಲು-ಶಿರ್ವ ರಸ್ತೆಯಲ್ಲಿ ಕೋಡುಗುಡ್ಡೆ ಬಳಿ ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಪವಾಡ ಸದೃಶ ರೀತಿಯಲ್ಲಿ ಪ್ರಯಾಣಿಕರು ಬಚಾವ್

ಬಂಟಕಲ್ಲು-ಶಿರ್ವ ರಸ್ತೆಯಲ್ಲಿ ಕೋಡುಗುಡ್ಡೆ ಬಳಿ ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಪವಾಡ ಸದೃಶ ರೀತಿಯಲ್ಲಿ ಪ್ರಯಾಣಿಕರು ಬಚಾವ್


ಶಿರ್ವ: ಕಟಪಾಡಿ-ಬಂಟಕಲ್ಲು-ಶಿರ್ವ-ಬೆಳ್ಮಣ್ ರಾಜ್ಯ ಹೆದ್ದಾರಿಯಲ್ಲಿ ಬಂಟಕಲ್ಲು ಸಮೀಪದ ಕೋಡುಗುಡ್ಡೆಯಲ್ಲಿ ಶನಿವಾರ ಬ್ರಹ್ಮಾವರ ದಿಂದ ಬೆಳ್ಮಣ್ ಗೃಹಪ್ರವೇಶ ಕಾರ್ಯಕ್ರಮಕ್ಕೆ ತೆರಳುತ್ತಿರುವ ಯುವಕರಿಂದ ಕಾರು ಚಾಲಕನ ನಿಯಂತ್ರಣ ತಪ್ಪಿ ಹೈಟೆನ್ಶನ್ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ ವಿದ್ಯುತ್ ಕಂಬ ತುಂಡಾಗಿದೆ.

ಕಾರು ಢಿಕ್ಕಿ ಹೊಡೆದ ರಭಸಕ್ಕೆ ಕಾರಿನ ಏರ್ ಬ್ಯಾಗ್ ತೆರೆದಿದ್ದು, ಕಾರಿನಲ್ಲಿದ್ದ ಐವರು ಯುವಕರು ಯಾವುದೇ ಗಾಯಗಳಾಗದೆ ಪ್ರಾಣಾಪಾಯದಿಂದ ಬಚಾವ್ ಆಗಿದ್ದಾರೆ.

ಢಿಕ್ಕಿಯ ರಭಸಕ್ಕೆ ಒಂದೆರಡು ತಿಂಗಳ ಹಿಂದೆ ಅಳವಡಿಸಿದ್ದ ಡಬಲ್ ಫೀಡರ್ ವಿದ್ಯುತ್ ಕಂಬಗಳು ಕಿತ್ತುಕೊಂಡು ತುಂಡಾಗಿ ಬಿದ್ದಿವೆ. ಪರಿಸರದಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಿದ್ದು, ತಕ್ಷಣ ಮೆಸ್ಕಾಮ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದು, ಶಿರ್ವದ ಮೆಸ್ಕಾಂ ಅಧಿಕಾರಿ ಮಂಜಪ್ಪರವರ ನೇತೃತ್ವದಲ್ಲಿ ವಿದ್ಯುತ್ ಸಂಪರ್ಕಕ್ಕಾಗಿ ಪರ‍್ಯಾಯ ವ್ಯವಸ್ಥೆ ಕಲ್ಪಿಸಿದ್ದು, ರಾತ್ರಿ 8.45ಕ್ಕೆ ಸರಿಪಡಿಸಿ ಮನೆ ಬೆಳಗಿಸಿದ್ದಾರೆ.

ಮೆಸ್ಕಾಂ ಅಧಿಕಾರಿಗಳು, ಸಿಬ್ಬಂಧಿಗಳ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article