ಕನ್ನಡ ಶ್ರೀಮಂತ ಭಾಷೆಯಾಗಿದ್ದು, ಇದನ್ನು ಉಳಿಸಿ ಬೆಳೆಸುವ ಕಾರ್ಯ ಆಗಬೇಕು: ಶಾಸಕ ಗುರ್ಮೆ ಸುರೇಶ್ ಶೆಟ್ಟಿ
ಅವರು ಮಂಗಳವಾರ ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷರ್ರು ಮತ್ತು ಕಾಪು ತಾಲೂಕು ಘಟಕದ ವತಿಯಿಂದ ಕಾಪು ಸಾರ್ವಜನಿಕ ಗ್ರಂಥಾಲಯದಲ್ಲಿ ಏರ್ಪಡಿಸಿದ ಕನ್ನಡ ಸಾಹಿತ್ಯ ಪರಿಷತ್ತು ಇದರ ‘೧೧೨ನೇ ಸಂಸ್ಥಾಪನಾ ದಿನಾಚರಣೆ’ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾಡನಾಡಿದರು.
ಅತೀ ಪುರಾತನ ಭಾಷೆಗಳಲ್ಲಿ ಕನ್ನಡವೂ ಒಂದಾಗಿದ್ದು, ಅನೇಕ ಮಹನೀಯರು ನಾಡು, ನುಡಿ, ಸಂಸ್ಕೃತಿ, ಈ ನೆಲದ ಪರಂಪರೆಯನ್ನು ಉಳಿಸಿ ಬೆಳೆಸಿದ್ದು, ಅವರ ಕೊಡುಗೆ ಅವಿಸ್ಮರಣೀಯ. ಕನ್ನಡ, ತುಳು ಭಾಷೆಗೆ ಶಾಸ್ತ್ರೀಯ ಸ್ಥಾನಮಾನ ನೀಡಬೇಕು. ಇದು ಹೃದಯದ ಭಾಷೆ. ನಮಗೆ ಕನಸುಗಳು ಬೀಳುವುದೂ ಕನ್ನಡ, ತುಳುವಿನಲ್ಲಿಯೇ. ಸ್ಫರ್ಧಾತ್ಮಕ ಪರೀಕ್ಷೆಗೂ ಕನ್ನಡದಲ್ಲಿಯೇ ಬರೆಯಲು ಅವಕಾಶವಿದೆ. ಈ ಬಗ್ಗೆ ಮಕ್ಕಳಿಗೆ ತರಬೇತಿ ನೀಡಬೇಕು. ನಾವೂ ಒದುಗರಾಗಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಪರಸಭಾ ವ್ಯಾಪ್ತಿಯ ಸಾರ್ವಜನಿಕ ಗ್ರಂಥಾಲಯಗಳ ಗ್ರಂಥ ಮೇಲ್ವಿಚಾರಕರುಗಳಾದ ಆಶಾ ಉಳಿಯಾರಗೋಳಿ, ಪೂರ್ಣಿಮಾ ಕಾಪು, ನಸ್ರಿನ್ ಫಾತಿಮಾ ಮಲ್ಲಾರು ಇವರನ್ನು ಪರಿಷತ್ತು ವತಿಯಿಂದ ಸನ್ಮಾನಿಸಿ, ಮೂರೂ ಗ್ರಂಥಾಲಯಗಳಿಗೆ ಪುಸ್ತಕಗಳನ್ನು ನೀಡಲಾಯಿತು.
ಗ್ರಂಥಾಲಯದ ಮೇಲ್ವಿಚಾರಕರುಗಳಿಂದ ಪರಸಭೆಯ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಮೋಹಿನಿ ಶೆಟ್ಟಿ ಇವನ್ನು ಸನ್ಮಾನಿಸಲಾಯಿತು. ಯಶೋದಾ ಎಲ್ಲೂರು ಸನ್ಮಾನಿತರನ್ನು ಪರಿಚಯಿಸಿದರು.
ಪುರಸಭಾ ಮುಖ್ಯ ಅಧಿಕಾರಿ ನೀಲಕಂಠ ಮೇಸ್ತ ದಿಕ್ಸೂಚಿ ಭಾಷಣದಲ್ಲಿ ಕನ್ನಡದ ಪ್ರಾಚೀನ ಶಾಸನದ ಬಗ್ಗೆ ಉಲ್ಲೇಖಿಸಿ, ಹಳೆಗನ್ನಡ, ನಡುಗನ್ನಡ, ಹೊಸಗನ್ನಡದ ಪರಂಪರೆಯ ಬಗ್ಗೆ ಗಮನ ಸೆಳೆದರು. ಕನ್ನಡ ಸಾಹಿತ್ಯ, ಸಂಗೀತ, ಕಲೆ, ವಿಜ್ಞಾನ, ತಂತ್ರಜ್ಞಾನ ಸಹಿತ ಇನ್ನಿತರ ವಿದ್ಯಾಮಾನಗಳಲ್ಲಿ ಕನ್ನಡಿಗರ ಸಾಧನೆಗಳು, ಕೊಡುಗೆಗಳು ಸ್ಮರಣೀಯವಾಗಿದ್ದು, ಕೃಷ್ಣರಾಜ ಒಡೆಯರ್, ವಿಶ್ವೇಶ್ವರಯ್ಯ, ಮಿರ್ಜಾ ಇಸ್ಮಾಯಿಲ್‌ರವರಿಂದ ಆರಂಭವಾದ ಕನ್ನಡ ಸಾಹಿತ್ಯ ಪರಿಷತ್ತು ಈ ಪರಂಪರೆಯನ್ನು ಉಳಿಸಿ ಬೆಳೆಸುವಲ್ಲಿ ಅಪಾರ ಕೊಡುಗೆ ನೀಡಿದೆ ಎಂದರು.
ಉಡುಪಿ ಜಿಲ್ಲಾ ಕಸಾಪ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಆಶಯದ ನುಡಿಗಳನ್ನಾಡಿದರು. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಪುರಸಭಾ ಅಧ್ಯಕ್ಷೆ ಮೋಹಿನಿ ಶೆಟ್ಟಿ, ಕಾಪು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಅಬ್ದುಲ್ ಹಮೀದ್ ಪಡುಬಿದ್ರಿ, ಕಸಾಪ ಜಿಲ್ಲಾ ಸಮಿತಿ ಪ್ರತಿನಿಧಿ ಕಟ್ಟಿಂಗೇರಿ ದೇವದಾಸ್ ಹೆಬ್ಬಾರ್ ಮಾತನಾಡಿದರು.
ಸಮಾರಂಭದ ಅಧ್ಯಕ್ಷತೆಯನ್ನು ಕಸಾಪ ಕಾಪು ತಾಲೂಕು ಅಧ್ಯಕ್ಷ ಬಿ. ಪುಂಡಲೀಕ ಮರಾಠೆ ವಹಿಸಿದ್ದರು. ಸಮಾರಂಭದಲ್ಲಿ ಜಿಲ್ಲಾ ಸಮಿತಿಯ ಸದಸ್ಯ ನರಂಹಮೂರ್ತಿ ರಾವ್, ತಾಲೂಕು ಸಂಘಟನಾ ಕಾರ್ಯದರ್ಶಿ ದೀಪಕ್ ಬೀರ, ಮಧುಕರ್ ಎಸ್. ಕಲ್ಯಾ, ಪುರಸಭಾ ಕೌನ್ಸಿಲರ್‌ಗಳಾದ ಅನಿಲ್ ಕುಮಾರ್, ಸರಿತಾ ಉಪಸ್ಥಿತರಿದ್ದರು.
ತಾಲೂಕು ಕೋಶಾಧ್ಯಕ್ಷ ವಿದ್ಯಾಧರ್ ಪುರಾಣಿಕ್ ಸ್ವಾಗತಿಸಿದರು. ಗೌ.ಕಾರ್ಯದರ್ಶಿ ನೀಲಾನಂದ ನಾಯ್ಕ್ ವಂದಿಸಿ, ಸಮಿತಿ ಸದಸ್ಯರಾದ ಸತ್ಯಸಾಯಿ ರಸಾದ್ ನಿರೂಪಿಸಿದರು.