ಅಪಘಾತಕ್ಕೆ ಕಾರಣವಾಗಿರುವ ಅಪೂರ್ಣ ಚತುಷ್ಪಥ ರಸ್ತೆ ಕಾಮಗಾರಿ, ದುರಸ್ತಿಗೆ ಒತ್ತಾಯಿಸಿ ರಸ್ತೆ ತಡೆ: ಪ್ರತಿಭಟನೆ
Tuesday, May 5, 2026
ಸುರತ್ಕಲ್: ಕಾನ -MRPL ಚತುಷ್ಪಥ ರಸ್ತೆ ಅಪೂರ್ಣ ಕಾಮಗಾರಿಯಿಂದಾಗಿ ದಿನನಿತ್ಯ ಅಪಘಾತಗಳು ಸಂಭವಿಸುತ್ತಿದ್ದು ಕೂಡಲೇ ರಸ್ತೆ ಕಾಮಗಾರಿ ಪೂರ್ಣಗೊಳಿಸುವಂತೆ ಒತ್ತಾಯಿಸಿ ಇಂದು ಕಾನ ಜಂಕ್ಷನ್ ಬಳಿ ಡಿವೈಎಫ್ಐ ಕಾನ ಘಟಕ, ಆಟೋ ರಿಕ್ಷಾ ಚಾಲಕರ ಸಂಘ (ಸಿಐಟಿಯು) ನಾಗರಿಕ ಹೋರಾಟ ಸಮಿತಿ ಕಾನ ನೇತೃತ್ವದಲ್ಲಿ ಇಂದು ರಸ್ತೆ ತಡೆ ಪ್ರತಿಭಟನೆ ನಡೆಯಿತು.
ಪ್ರತಿಭಟನೆ ಉದ್ದೇಶಿಸಿ ಡಿವೈಎಫ್ಐ ಜಿಲ್ಲಾಧ್ಯಕ್ಷ ಬಿ.ಕೆ. ಇಮ್ತಿಯಾಜ್ ಮಾತನಾಡಿ, ನಾಗರಿಕರ ಸುಧೀರ್ಘ ಹೋರಾಟದ ಬಳಿಕ ಚತುಷ್ಪಥ ರಸ್ತೆ ಕಾಮಗಾರಿ ನಡೆಸಲು ಸರಕಾರ ಅನುದಾನ ಬಿಡುಗಡೆ ಮಾಡಿತ್ತು ಆದರೆ ನಗರಪಾಲಿಕೆ ಮತ್ತು ಲೋಕೋಪಯೋಗಿ ಇಲಾಖೆಯ ತಿಕ್ಕಾಟದಿಂದ ರಸ್ತೆಗೆ ವಾರಿಸುದಾರರು ಇಲ್ಲದಂತಾಗಿದೆ ದಿನನಿತ್ಯ ದ್ವಿಚಕ್ರ ಸವಾರರು ಅಪಘಾತಕ್ಕೆ ಒಳಗಾಗುತ್ತಿದ್ದರೂ ಸಂಭಂದಪಟ್ಟ ಅಧಿಕಾರಿಗಳು ಕ್ರಮ ಕೈಗೊಳ್ಳುತ್ತಿಲ್ಲ ಜನಪ್ರತಿನಿದಿನಗಳು ಮೂಕ ಪ್ರೇಕ್ಷಕರಂತೆ ವರ್ತಿಸುತ್ತಿದ್ದಾರೆ ಎಂದು ಆರೋಪಿಸಿದ ಅವರು ಕೂಡಲೇ ಕಾಮಗಾರಿ ಪೂರ್ಣಗೊಳಿಸದಿದ್ದಲ್ಲಿ ನಗರಪಾಲಿಕೆಗೆ ಮುತ್ತಿಗೆ ಹಾಕುವ ಎಚ್ಚರಿಕೆ ನೀಡಿದರು.
ಡಿವೈಎಫ್ಐ ಸುರತ್ಕಲ್ ವಲಯ ಕಾರ್ಯದರ್ಶಿ ಶ್ರೀನಾಥ್ ಕುಲಾಲ್, ಆಟೋ ರಿಕ್ಷಾ ಚಾಲಕರ ಸಂಘದ ಅಧ್ಯಕ್ಷ ಅಬ್ದುಲ್ ಬಷೀರ್ ಮಾತನಾಡಿದರು.
ವಿವಿಧ ಸಂಘಟನೆಗಳ ಪ್ರಮುಖರಾದ ಬಿ.ಕೆ ಮಸೂದ್,ಅಜ್ಮಾಲ್ ಅಹ್ಮದ್, ಮೆಹಬೂಬ್ ಖಾನ್, ಜಗದೀಶ್, ಅಬ್ದುಲ್ ರಹೀಮ್,ಶರೀಫ್ ಜನತಾ ಕಾಲನಿ, ಅಬೂಬಕ್ಕರ್ ಕೆ.ಪಿ, ಫ್ರಾನ್ಸಿಸ್ ಡಿಸೋಜಾ, ಮುಸ್ತಫಾ ಒಟ್ಟೆಕಾಯರ್, ಲಕ್ಷ್ಮೀಶ ಅಂಚನ್, ಹಂಝ ಮೈಂದಗುರಿ, ಸುಧೀರ್ ಕೋಡಿಕೆರೆ, ಐ ಮೊಹಮ್ಮದ್, ಇಬ್ರಾಹಿಂ ಹಳೆಮನೆ, ಅಶ್ರಫ್,ಬಷೀರ್ ಕುಳಾಯಿ ಮೊದಲಾದವರು ಉಪಸ್ಥಿತರಿದ್ದರು.

