ರೆಡ್‌ಕ್ರಾಸ್ ಸಭಾಪತಿಗಳಿಂದ ರಾಜ್ಯಪಾಲರ ಭೇಟಿ
Monday, May 11, 2026
ಉಡುಪಿ: ಕರ್ನಾಟಕ ರಾಜ್ಯ ರೆಡ್‌ಕ್ರಾಸ್ ಸಭಾಪತಿ ಮತ್ತು ಉಡುಪಿ ಜಿಲ್ಲಾ ಸಭಾಪತಿಗಳಾದ ಬಸ್ರೂರು ರಾಜೀವ ಶೆಟ್ಟಿ ಇವರು ಕರ್ನಾಟಕ ಸರ್ಕಾರದ ರಾಜ್ಯಪಾಲ ಥಾವರ್‌ಚಂದ್ ಗೆಹಲೋಟ್ ಅವರನ್ನು ಭೇಟಿಯಾಗಿ ರೆಡ್‌ಕ್ರಾಸ್ ಚಟುವಟಿಕೆಗಳ ಬಗ್ಗೆ ಚರ್ಚಿಸಿದರು.
ಈ ಸಂದರ್ಭದಲ್ಲಿ ರಾಜ್ಯದ ರೆಡ್‌ಕ್ರಾಸ್ ಚಟುವಟಿಕೆಗಳ ಬಗ್ಗೆ ತೃಪ್ತಿ ವ್ಯಕ್ತಪಡಿಸಿದ ರಾಜ್ಯಪಾಲರು ರೆಡ್ ಕ್ರಾಸ್‌ನ ಚಟುವಟಿಕೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಕೆಲವು ಸಲಹೆಗಳನ್ನು ನೀಡಿದರು.
ರಾಜ್ಯ ಆಡಳಿತ ಮಂಡಳಿಯ ಕೆಲವು ಸದಸ್ಯರು ಉಪಸ್ಥಿತರಿದ್ದರು.
ವಾರ್ಷಿಕ ಮಹಾಸಭೆ:
ಉಡುಪಿ ಜಿಲ್ಲಾ ರೆಡ್‌ಕ್ರಾಸ್ ಘಟಕದ ವಾರ್ಷಿಕ ಮಹಾಸಭೆಯು ರೆಡ್‌ಕ್ರಾಸ್ ಅಧ್ಯಕ್ಷರು ಮತ್ತು ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಇವರ ಅಧ್ಯಕ್ಷತೆಯಲ್ಲಿ ಮೇ 13 ರಂದು ಬೆಳಗ್ಗೆ 10.30 ಕ್ಕೆ ಉಡುಪಿ ಟೌನ್‌ಹಾಲಿನ ಮಿನಿಹಾಲ್‌ನಲ್ಲಿ ನಡೆಯಲಿದ್ದು ರೆಡ್‌ಕ್ರಾಸ್‌ನ ಸದಸ್ಯರು ಭಾಗವಹಿಸುವಂತೆ ಪ್ರಕಟಣೆ ತಿಳಿಸಿದೆ.