ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ವಿಶ್ರುತಿ 2ಕೆ26’ ಕಾರ್ಯಕ್ರಮ

ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ವಿಶ್ರುತಿ 2ಕೆ26’ ಕಾರ್ಯಕ್ರಮ


ಉಜಿರೆ: ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಐಕ್ಯುಎಸಿ ಮತ್ತು ಮಾನವಿಕ ಸಂಘ ಇವುಗಳ ಆಶ್ರಯದಲ್ಲಿ ಕಲಾ ವಿಭಾಗದ ವಿದ್ಯಾರ್ಥಿಗಳಿಗಾಗಿ ‘ವಿಶೃತಿ 2ಕೆ26’ ಕಾರ್ಯಕ್ರಮ ನಡೆಯಿತು.

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನ ಕಲಾ ವಿಭಾಗದ ಡೀನ್ ಹಾಗೂ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಡಾ. ಭಾಸ್ಕರ ಹೆಗಡೆ  ಕಾರ್ಯಕ್ರಮ ಉದ್ಘಾಟಿಸಿ ಕಲಾವಿಭಾಗದ ವಿದ್ಯಾರ್ಥಿಗಳಿಗೆ ಉತ್ತೇಜನವನ್ನು ನೀಡಲು ಹಾಗೂ ಅವರ ಪ್ರತಿಭೆಗಳಿಗೆ ರಚನಾತ್ಮಕ ದೃಷ್ಟಿಕೋನವನ್ನು ನೀಡಲು ಈ ರೀತಿಯ ಕಾರ್ಯಕ್ರಮಗಳು ಅತ್ಯಂತ ಪ್ರಯೋಜನಕಾರಿ. ಕಲಾವಿಭಾಗದ ವಿದ್ಯಾರ್ಥಿಗಳು ವಾಣಿಜ್ಯ ಮತ್ತು ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗಿಂತಲೂ ಹೆಚ್ಚಿನ ಅವಕಾಶಗಳನ್ನು ಹೊಂದಿದ್ದಾರೆ. ಅವುಗಳನ್ನು ಸದುಪಯೋಗಪಡಿಸಿಕೊಳ್ಳಲು ಈ ರೀತಿಯ ಕಾರ್ಯಕ್ರಮ ಸಹಕಾರಿಯಾಗಿದೆ. ಈಗಾಗಲೇ ಸಾಧನೆ ಮಾಡಿರುವ ಅನೇಕ ಕಲಾ ವಿಭಾಗದ ವಿದ್ಯಾರ್ಥಿಗಳ ಘಟನೆಗಳನ್ನು ಉಲ್ಲೇಖಿಸಿ ಕಲಾ ವಿಭಾಗದ ವಿದ್ಯಾರ್ಥಿಗಳು ಯಾವುದರಲ್ಲೂ ಕಡಿಮೆ ಇಲ್ಲ ಎಂದು ತಿಳಿಸಿದರು.

ಭವಿಷ್ಯದ ಬಗ್ಗೆ ಭಯ ಇದ್ದಾಗ ಅವರ ಜೀವನದಲ್ಲಿ ಜಯ ಸಿಗುತ್ತದೆ. ವಿದ್ಯಾರ್ಥಿಗಳು ಭವಿಷ್ಯದ ಬಗ್ಗೆ ಆಲೋಚಿಸಿ ಅಧ್ಯಯನದಲ್ಲಿ ತೊಡಗಿಸಿಕೊಳ್ಳಬೇಕು. ಈ ರೀತಿಯ ಕಾರ್ಯಕ್ರಮಗಳ ಮೂಲಕ ತಮ್ಮ ಕೌಶಲ್ಯ ಮತ್ತು ನಾಯಕತ್ವವನ್ನು ರೂಡಿಸಿಕೊಳ್ಳಬೇಕು ಎಂದರು.

ಮಾನವಿಕ ಸಂಘದ ಸಂಯೋಜಕ ಪ್ರೊ. ರೊನಾಲ್ಡ್ ಪ್ರವೀಣ್ ಕೊರಾಯ ಪ್ರಾಸ್ತಾವಿಕವಾಗಿ ಮಾತನಾಡಿ, ವಿದ್ಯಾರ್ಥಿಗಳಿಗೆ ಉತ್ತಮ ಶೈಕ್ಷಣಿಕ ವಾತಾವರಣ ನಿರ್ಮಿಸಿದಾಗ ಅವರು ಉತ್ತಮ ಸಾಧನೆ ಮಾಡಲು ಅನುಕೂಲವಾಗುತ್ತದೆ. ಈ ರೀತಿಯ ಕಾರ್ಯಕ್ರಮಗಳ ಮೂಲಕ ವಿದ್ಯಾರ್ಥಿಗಳಿಗೆ ಉತ್ತಮ ಕಲಿಕೆಯ ವಾತಾವರಣ ನಿರ್ಮಾಣ ಮಾಡಲು ಸಾಧ್ಯ ಎಂದು ತಿಳಿಸಿದರು. 

ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನ ಅಧಿಕಾರಿ ಪ್ರೊ. ಪದ್ಮನಾಭ ಕೆ. ಅಧ್ಯಕ್ಷತೆ ವಹಿಸಿ ಇಂದು ಅಧಿಕಾರಿ ವರ್ಗದವರು ಐಎಎಸ್ ಮತ್ತು ಕೆಎಎಸ್ ಪರೀಕ್ಷೆಯಲ್ಲಿ ಉತ್ತೀರ್ಣರಾಗುವವರು ಕಲಾವಿಭಾಗದ ವಿದ್ಯಾರ್ಥಿಗಳು ಹೆಚ್ಚು. ಕಲಾವಿಭಾಗದ ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ಮಾಡಲು ಈ ರೀತಿಯ ಕಾರ್ಯಕ್ರಮಗಳು ಅನುಕೂಲಕರ ಎಂದು ತಿಳಿಸಿದರು.

ಇತಿಹಾಸ ವಿಭಾಗದ ಮುಖ್ಯಸ್ಥೆ ಪ್ರೊ. ಕವಿತಾ ಹಾಗೂ ಸ್ನಾತಕೋತ್ತರ ವಿಭಾಗದ ಸಂಚಾಲಕ ಡಾ. ರವಿ ಎಂ.ಎನ್. ಉಪಸ್ಥಿತರಿದ್ದರು.

ಕನ್ನಡ ವಿಭಾಗದ ಮುಖ್ಯಸ್ಥ ಪ್ರೊ. ಮಾರುತಿ ಸ್ವಾಗತಿಸಿದರು. ಅಂತಿಮ ಬಿಎ ವಿದ್ಯಾರ್ಥಿ ಜಗದೀಶ್ ಹಾಗೂ ದ್ವಿತೀಯ ಬಿಎ ವಿದ್ಯಾರ್ಥಿನಿ ನಸೀಬಾ ಕಾರ್ಯಕ್ರಮ  ನಿರೂಪಿಸಿದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article