ತೋಟಕ್ಕೆ ಉರುಳಿದ ಕಾರು: ಪ್ರಯಾಣಿಕರು ಅಪಾಯದಿಂದ ಪಾರು

ತೋಟಕ್ಕೆ ಉರುಳಿದ ಕಾರು: ಪ್ರಯಾಣಿಕರು ಅಪಾಯದಿಂದ ಪಾರು


ಉಜಿರೆ: ಗುರುವಾಯನಕೆರೆ-ಕಾರ್ಕಳ ರಾಜ್ಯ ಹೆದ್ದಾರಿಯ ಅಳದಂಗಡಿಯ ಕೆದ್ದು ಸಮೀಪ ಕಾರ್ಕಳ ಕಡೆ ತೆರಳುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ತೋಟಕ್ಕೆ ಉರುಳಿದ ಘಟನೆ ಶನಿವಾರ ರಾತ್ರಿ ನಡೆದಿದೆ.

ಕಾರಿನಲ್ಲಿ ಪ್ರಯಾಣಿಸುತ್ತಿದ್ದವರು ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

ಈ ಸ್ಥಳವು ಅಪಘಾತ ವಲಯವಾಗಿದ್ದು, ಆಗಾಗ ಅಪಘಾತಗಳು ಉಂಟಾಗುತ್ತಿವೆ ಎಂದು ಸ್ಥಳೀಯರು ತಿಳಿಸಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article