ಜಿಪಿಟಿ ಶಿಕ್ಷಕ ಮೋಹನ್ ರಾಷ್ಟ್ರ ಮಟ್ಟಕ್ಕೆ ಆಯ್ಕೆ
Tuesday, May 26, 2026
ಉಜಿರೆ: ಬೆಂಗಳೂರಿನ ಶ್ರೀ ಕಂಠೀರವ ಕ್ರೀಡಾಂಗಣದಲ್ಲಿ ಮೇ 23ರಿಂದ 25ರ ತನಕ ನಡೆದ ಕರ್ನಾಟಕ ರಾಜ್ಯ ಸರಕಾರಿ ನೌಕರರ ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ ದ.ಕ. ಜಿಲ್ಲೆಯನ್ನು ಪ್ರತಿನಿದಿಸಿದ್ದ ಮುಂಡಾಜೆ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯ ಜಿಪಿಟಿ ಶಿಕ್ಷಕ ಮೋಹನ್ ಕೆ. ಇವರು ಪುರಷರ ವಿಭಾಗದ 200 ಮೀ ಓಟದ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಅವರು ಉದ್ದ ಜಿಗಿತದಲ್ಲಿ ತೃತೀಯ ಸ್ಥಾನ ಪಡೆದುಕೊಂಡಿದ್ದು, ದಕ್ಷಿಣ ಕನ್ನಡ ಜಿಲ್ಲಾ ಖೋಖೋ ತಂಡದ ನಾಯಕನಾಗಿ ಸೆಮಿಫೈನಲ್ ತನಕ ತಂಡವನ್ನು ಮುನ್ನಡೆಸಿ ಉತ್ತಮ ಪ್ರದರ್ಶನ ನೀಡಿದ್ದಾರೆ.