ಪ್ರತಿಯೊಬ್ಬರಿಗೂ ಅವಕಾಶ ಇರುತ್ತದೆ, ಅದನ್ನು ಗುರುತಿಸಲು ಕಲಿಯಬೇಕು: ವೀರು ಶೆಟ್ಟಿ
ಅವರು ರುಡ್‌ಸೆಟ್ ಸಂಸ್ಥೆ, ಸಿದ್ಧವನ, ಉಜಿರೆ ವತಿಯಿಂದ 30 ದಿನಗಳ ಕಾಲ ಆಯೋಜಿಸಲಾದ ಇಲೆಕ್ಟ್ರಿಕಲ್ ಮೋಟಾರ್ ರಿವೈಂಡಿಂಗ್ ತರಬೇತಿ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ, ಶಿಬಿರಾರ್ಥಿಗಳಿಗೆ ಪ್ರಮಾಣಪತ್ರ ವಿತರಿಸಿ ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ರುಡ್‌ಸೆಟ್ ಸಂಸ್ಥೆಗಳ ಕೇಂದ್ರ ಕಚೇರಿ ಉಜಿರೆಯ ಕಾರ್ಯನಿರ್ವಾಹಕ ನಿರ್ದೇಶಕ ಬಿ.ಪಿ. ವಿಜಯ ಕುಮಾರ್ ಮಾತನಾಡಿ, “ರುಡ್‌ಸೆಟ್‌ನ ತರಬೇತಿಗಳು ಕೇವಲ ಕೌಶಲ್ಯಾಭಿವೃದ್ಧಿಗೆ ಮಾತ್ರ ಸೀಮಿತವಾಗಿಲ್ಲ. ವ್ಯಕ್ತಿತ್ವ ವಿಕಸನ, ಆತ್ಮವಿಶ್ವಾಸ ಹಾಗೂ ಉದ್ಯಮಶೀಲ ಮನೋಭಾವ ಬೆಳೆಸುವ ದಿಕ್ಕಿನಲ್ಲಿ ಅವು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುತ್ತಿವೆ. ತರಬೇತಿಯ ಮೂಲಕ ಪಡೆದ ಜ್ಞಾನ ಮತ್ತು ಕೌಶಲ್ಯಗಳನ್ನು ಜೀವನದಲ್ಲಿ ಸದುಪಯೋಗಪಡಿಸಿಕೊಂಡು ಯಶಸ್ಸಿನತ್ತ ಸಾಗಬೇಕು” ಎಂದು ಹೇಳಿದರು.
ಸಂಸ್ಥೆಯ ನಿರ್ದೇಶಕ ಅಜೇಯ ಅತಿಥಿಗಳನ್ನು ಸ್ವಾಗತಿಸಿದರು. ಹಿರಿಯ ಉಪನ್ಯಾಸಕ ಅಬ್ರಹಾಂ ಜೇಮ್ಸ್ ಕಾರ್ಯಕ್ರಮ ನಿರೂಪಿಸಿದರು. ಹಿರಿಯ ಉಪನ್ಯಾಸಕ ಕೆ. ಕರುಣಾಕರ ಜೈನ್ ಧನ್ಯವಾದ ಸಮರ್ಪಿಸಿದರು. ಕುಮಾರಿ ಶ್ರವಣಿ ಮತ್ತು ಕುಮಾರಿ ಜಲಜಾಕ್ಷಿ ಅವರ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಆರಂಭವಾಯಿತು.
ಈ ಸಂದರ್ಭದಲ್ಲಿ ಶಿಬಿರಾರ್ಥಿಗಳಾದ ಉದಯ ಹಾಗೂ ನಿತೀಶ್ ತಮ್ಮ ತರಬೇತಿ ಅನುಭವಗಳನ್ನು ಹಂಚಿಕೊಂಡು, ರುಡ್‌ಸೆಟ್ ಸಂಸ್ಥೆಯ ತರಬೇತಿಯು ತಮ್ಮ ಜೀವನದಲ್ಲಿ ಹೊಸ ಆತ್ಮವಿಶ್ವಾಸ ಮೂಡಿಸಿದ್ದು, ಉದ್ಯೋಗ ಹಾಗೂ ಸ್ವಉದ್ಯೋಗದ ದಿಕ್ಕಿನಲ್ಲಿ ಮುನ್ನಡೆಯಲು ಪ್ರೇರಣೆ ನೀಡಿದೆ ಎಂದು ಅಭಿಪ್ರಾಯಪಟ್ಟರು.
