ಹೆದ್ದಾರಿಯ ತಾತ್ಕಾಲಿಕ ತಡೆಗೋಡೆಗೆ ಕಾರು ಢಿಕ್ಕಿ

ಹೆದ್ದಾರಿಯ ತಾತ್ಕಾಲಿಕ ತಡೆಗೋಡೆಗೆ ಕಾರು ಢಿಕ್ಕಿ

ಉಜಿರೆ: ಹೆದ್ದಾರಿ ರಸ್ತೆ ಕಾಮಗಾರಿ ಸಲು ವಾಗಿ ರಸ್ತೆ ಬದಿ ಹಾಕಲಾಗಿರುವ ತಾತ್ಕಾಲಿಕ ತಡೆಗೋಡೆಗೆ ಕಾರು ಢಿಕ್ಕಿ ಹೊಡೆದ ಪ್ರಕರಣ ಬುಧವಾರ ತಡರಾತ್ರಿ ನಡೆದಿದೆ.

ಮಂಗಳೂರು-ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಕಾಮಗಾರಿ ಪ್ರಗತಿಯಲ್ಲಿದ್ದು, ಮುಂಡಾಜೆಯ ಸನ್ಯಾಸಿಕಟ್ಟೆ ಶ್ರೀ ಪರಶುರಾಮ ದೇವಸ್ಥಾನದ ಮುಂಭಾಗದಿಂದ ಹಾದುಹೋಗುವ ರಸ್ತೆಯ ಒಂದು ಬದಿ ನೂತನ ಸೇತುವೆ ರಚನೆ ಕಾಮಗಾರಿ ನಡೆಯುತ್ತಿದ್ದು, ಅದು ಪೂರ್ಣಗೊಂಡಿಲ್ಲ. ಈ ರಸ್ತೆ ಮೂಲಕ ವಾಹನ ಸಂಚಾರ ನಡೆಸದಂತೆ ರಸ್ತೆ ಬದಿ ತಾತ್ಕಾಲಿಕ ತಡೆಗೋಡೆಯನ್ನು ಇರಿಸಲಾಗಿದೆ. ಚಾರ್ಮಾಡಿ ಕಡೆಯಿಂದ ಉಜಿರೆ ಕಡೆ ಹೋಗುತ್ತಿದ್ದ ಕಾರು ಹತೋಟಿತಪ್ಪಿ ತಡೆಗೋಡೆಗೆ  ಡಿಕ್ಕಿಯಾಗಿದ್ದು ಕಾರಿಗೆ ಹಾನಿ ಉಂಟಾಗಿದೆ.ಕಾರಿನಲ್ಲಿದ್ದವರು ಅಪಾಯದಿಂದ ಪಾರಾಗಿದ್ದರೆ.

ತಾಲೂಕಿನಲ್ಲಿ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ ವ್ಯಾಪ್ತಿಯಲ್ಲಿ ಕಳೆದ ಮೂರು ವರ್ಷಗಳಿಂದ ರಸ್ತೆ ಕಾಮಗಾರಿ ಪ್ರಗತಿಯಲ್ಲಿದೆ. ಹೆಚ್ಚಿನ ಕಡೆ ಕಾಮಗಾರಿ ಅರ್ಧಂಬರ್ಧ ನಡೆದಿದ್ದು ಹಲವಾರು ಅಪಘಾತಗಳು ಸಂಭವಿಸುತ್ತಿವೆ. ಕಾಮಗಾರಿ ನಡೆಯುವ ಸ್ಥಳಗಳಲ್ಲಿ ಸರಿಯಾದ ಸೂಚನಾ ಫಲಕ, ರಿಫ್ಲೆಕ್ಟರ್‌ಗಳ ವ್ಯವಸ್ಥೆ, ಬೀದಿ ದೀಪಗಳ ವ್ಯವಸ್ಥೆಯು ಇಲ್ಲದಿರುವುದರಿಂದ ವಾಹನ ಸವಾರರು ಸಾಕಷ್ಟು ಪರದಾಟ ನಡೆಸುವಂತಾಗಿದೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article