ಬೆಳ್ತಂಗಡಿ ನ್ಯಾಯಾಲಯ ಕಟ್ಟಡಕ್ಕೆ ಸರ್ಕಾರದ ಅನುಮೋದನೆ
Saturday, May 23, 2026
ಉಜಿರೆ: ಬಹು ನಿರೀಕ್ಷಿತ ಬೆಳ್ತಂಗಡಿ ನೂತನ ನ್ಯಾಯಾಲಯ ಸಂಕೀರ್ಣದ ಕಟ್ಟಡ ಕಾಮಗಾರಿ ಆರಂಭಕ್ಕೆ ಹಸಿರು ನಿಶಾನೆ ದೊರಕಿದ್ದು ಹೊಸ ನ್ಯಾಯಾಲಯ ಕಟ್ಟಡ ನಿರ್ಮಾಣ ಕಾಮಗಾರಿಯ ಆರ್ಥಿಕ ಬಿಡ್ ಗೆ ಸರಕಾರ ಅನುಮೋದನೆ ನೀಡಿದ್ದು,ಬೆಳ್ತಂಗಡಿ ವಕೀಲರ ಸಂಘದ ಪದಾಧಿಕಾರಿಗಳ ಜೊತೆ ಸಮಾಲೋಚಿಸಿ ಶಂಕುಸ್ಥಾಪನೆ ನಡೆಸಲು ಕಾನೂನು ಸಚಿವರು ಮತ್ತು ಲೋಕೋಪಯೋಗಿ ಸಚಿವರ ಜೊತೆ ಚರ್ಚಿಸಲಾಗುವುದು ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾo ತಿಳಿಸಿದ್ದಾರೆ.
ಮೇ 19 ರಂದು ಈ ಬಗ್ಗೆ ಸರ್ಕಾರದ ಪ್ರಧಾನ ಕಾರ್ಯದರ್ಶಿ, ಲೋಕೋಪಯೋಗಿ ಇಲಾಖೆ, ವಿಕಾಸ ಸೌಧ, ಬೆಂಗಳೂರು ಇವರು ಮುಖ್ಯ ಇಂಜಿನಿಯರ್, ಸಂಪರ್ಕ ಮತ್ತು ಕಟ್ಟಡಗಳು (ಕೇಂದ್ರ), ಶಿವಮೊಗ್ಗ ಇವರಿಗೆ ಆದೇಶ ನೀಡಿರುವುದಾಗಿ ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.