ಡಿ. ಸುಧಾಕರ್ ಚಳ್ಳಕೆರೆ ಅವರ ನಿಧನಕ್ಕೆ ಹೆಗ್ಗಡೆ ಸಂತಾಪ

ಡಿ. ಸುಧಾಕರ್ ಚಳ್ಳಕೆರೆ ಅವರ ನಿಧನಕ್ಕೆ ಹೆಗ್ಗಡೆ ಸಂತಾಪ


ಉಜಿರೆ: ಯೋಜನೆ ಮತ್ತು ಸಾಂಖಿಕ ಸಚಿವರಾಗಿದ್ದ ಡಿ. ಸುಧಾಕರ್ ಚಳ್ಳಕೆರೆ ಅವರು ನಿಧನರಾದ ವಿಚಾರ ತಿಳಿದು ವಿಷಾದವಾಯಿತು. ರಾಜಕೀಯ ಕ್ಷೇತ್ರದಲ್ಲಿ ಹೆಚ್ಚಿನ ಅನುಭವ ಹೊಂದಿದ್ದ ಅವರು ಶಾಸಕರಾಗಿ, ಸಚಿವರಾಗಿ ಉತ್ತಮ ಸೇವೆ ಮಾಡಿರುತ್ತಾರೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರು ಸಂತಾಪ ಸೂಚಿಸಿದ್ದಾರೆ.

ಶ್ರೀಕ್ಷೇತ್ರ ಧರ್ಮಸ್ಥಳದ ಅಪಾರ ಅಭಿಮಾನಿಯೂ, ಭಕ್ತರೂ ಆಗಿದ್ದು ಅನೇಕ ಬಾರಿ ಇಲ್ಲಿಗೆ ಬಂದು ದೇವರ ದರ್ಶನವನ್ನು ಪಡೆದು ನನ್ನೊಂದಿಗೆ ಹೆಚ್ಚು ಕಾಲ ಮಾತುಕತೆ ನಡೆಸಿ ಹೋಗುತ್ತಿದ್ದರು. ಇತ್ತೀಚೆಗೆ ಧರ್ಮಸ್ಥಳಕ್ಕೆ ಬಂದ ಸಂದರ್ಭದಲ್ಲಿ ನಮ್ಮ ಆನೆ ಮರಿ ‘ಶಿವಾನಿ’ಯ ಹುಟ್ಟುಹಬ್ಬದಲ್ಲಿ ಸಂತೋಷದಿಂದ ಭಾಗವಹಿಸಿ ಸಂಭ್ರಮಿಸಿರುವುದು ನನಗೆ ಇನ್ನೂ ಸ್ಮರಣೆಯಲ್ಲಿದೆ.

ಸರಕಾರವು ತಮಗೆ ನೀಡಿದ ಜವಾಬ್ದಾರಿಯನ್ನು ಸಮರ್ಪಕವಾಗಿ ನಿರ್ವಹಿಸಿ ಜನಾನುರಾಗಿಯಾಗಿದ್ದ ಅವರು ಪಕ್ಷದ ವರಿಷ್ಟರೊಂದಿಗೆ ಸೌಹಾರ್ದಯುತ ಸಂಪರ್ಕವನ್ನು ಇಟ್ಟುಕೊಂಡು ತಮ್ಮ ಕ್ಷೇತ್ರದಲ್ಲಿ ಉತ್ತಮ ಸೇವಾಕಾರ್ಯಗಳನ್ನು ಮಾಡುತ್ತಿರುವುದನ್ನು ನಾನು ಗಮನಿಸಿದ್ದೇನೆ.

ಧರ್ಮಸ್ಥಳದಲ್ಲಿ ಭಗವಾನ್ ಬಾಹುಬಲಿ ಸ್ವಾಮಿಯ ಮಹಾಮಸ್ತಕಾಭಿಷೇಕದ ಸಮಿತಿಯ ಸಭೆಗಳಲ್ಲಿ ಆಸಕ್ತಿಯಿಂದ ಭಾಗವಹಿಸುತ್ತಿದ್ದ ಅವರು, ಮಸ್ತಕಾಭಿಷೇಕದ ಯಶಸ್ಸಿಗೆ ಸಕ್ರಿಯ ಸಹಕಾರ ನೀಡಿ ಪ್ರೋತ್ಸಾಹಿಸುತ್ತಿದ್ದರು. ಅಲ್ಪಕಾಲದ ಅನಾರೋಗ್ಯದಿಂದ ಅಗಲಿದ ಡಿ. ಸುಧಾಕರ್ ಅವರ ಆತ್ಮಕ್ಕೆ ಚಿರಶಾಂತಿಯನ್ನು ಕೋರುತ್ತೇನೆ ಹಾಗೂ ಕುಟುಂಬಸ್ಥರಿಗೆ ಅವರ ಅಗಲುವಿಕೆಯಿಂದ ಉಂಟಾದ ದುಃಖವನ್ನು ಸಹಿಸುವ ಶಕ್ತಿ-ತಾಳ್ಮೆಯನ್ನಿತ್ತು ಶ್ರೀ ಮಂಜುನಾಥ ಸ್ವಾಮಿ ಹರಸಲೆಂದು ಪ್ರಾರ್ಥಿಸುತ್ತೇನೆ ಎಂದು ಡಿ. ವೀರೇಂದ್ರ ಹೆಗ್ಗಡೆ ಸಂತಾಪ ಸೂಚಿಸಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article