ಬೀಚ್‌ನಲ್ಲಿ ಪತ್ತೆಯಾದ ಮೃತದೇಹ
Tuesday, May 19, 2026
ಉಳ್ಳಾಲ: ಅಪರಿಚಿತ ವ್ಯಕ್ತಿಯೊಬ್ಬರ ಮೃತದೇಹ ಉಳ್ಳಾಲ ಸಮುದ್ರ ತೀರ ಪ್ರದೇಶದಲ್ಲಿ ಸೋಮವಾರ ಸಂಜೆ ಪತ್ತೆಯಾಗಿದೆ.
ಘಟನಾ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಮೃತದೇಹವನ್ನು ವಶಕ್ಕೆ ಪಡೆದು ಪರಿಶೀಲನೆ ನಡೆಸುತ್ತಿದ್ದಾರೆ. ಮೃತ ವ್ಯಕ್ತಿಯ ಗುರುತು ಇನ್ನೂ ಪತ್ತೆಯಾಗಿಲ್ಲ. ಇವರು ಬೆಳಿಗ್ಗೆ ಬೀಚ್‌ನಲ್ಲಿ ಕುಳಿತು ಮಾತನಾಡುತ್ತಿದ್ದರು ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೃತದೇಹವನ್ನು ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದ್ದು, ವಾರಿಸುದಾರರ ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ.ಇವರು ಆತ್ಮಹತ್ಯೆ ಮಾಡಿಕೊಂಡಿರಬೇಕು ಎಂದು ಪೊಲೀಸರು ಶಂಕಿಸಿದ್ದಾರೆ.
ಈ ವ್ಯಕ್ತಿಯನ್ನು ಯಾರಾದರೂ ಗುರುತಿಸಿದಲ್ಲಿ ಸಮೀಪದ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಮನವಿ ಮಾಡಲಾಗಿದೆ.