ರಸ್ತೆ ಅಪಘಾತದಲ್ಲಿ ಸ್ಕೂಟರ್ ಸವಾರ ಮೃತ್ಯು
Monday, May 25, 2026
ವಿಟ್ಲ: ಮಾಣಿ ಸಮೀಪ ರವಿವಾರ ಸಂಭವಿಸಿದ ರಸ್ತೆ ಅಪಘಾತದಲ್ಲಿ ಸ್ಕೂಟರ್ ಸವಾರರೊಬ್ಬರು ಮೃತಪಟ್ಟಿದ್ದಾರೆ.
ಕಲ್ಲಡ್ಕದಿಂದ ಪುತ್ತೂರಿನತ್ತ ಬರುತ್ತಿದ್ದ ಸ್ಕೂಟರ್ ಲಾರಿಯ ಹಿಂಭಾಗಕ್ಕೆ ಢಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಸವಾರ ಕಲಂದರ್ ಶಾ ಅವರು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ. ಅವರು ಮೂಲತಃ ಸುಳ್ಯ ನಿವಾಸಿಯಾಗಿದ್ದು, ಪ್ರಸ್ತುತ ಪುತ್ತೂರಿನ ಕಲ್ಲರ್ಪೆಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದು, ಮಂಗಳೂರು ಧಕ್ಕೆಯಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.