ಅಕ್ರಮ ಮರಳು ದಂಧೆ: ದೂರು
Friday, June 12, 2026
ಬಂಟ್ವಾಳ: ಪಾಣೆಮಂಗಳೂರು ನೇತ್ರಾವತಿ ನದಿ ತೀರದಿಂದ ಅವ್ಯವಾಹತವಾಗಿ ಅಕ್ರಮ ಮರಳು ದಂಧೆ ನಡೆಯತ್ತಿದೆ ಎಂಬ ಗಂಭೀರ ಆರೋಪ ವ್ಯಕ್ತವಾಗಿದ್ದು, ಈ ಬಗ್ಗೆ ಗಣೇಶ್ ನಾಯಕ್ ಎಂಬವರು ಪೊಲೀಸ್ ಇಲಾಖೆಗೆ ದೂರು ನೀಡಿದ್ದಾರೆ.
ನೇತ್ರಾವತಿ ನದಿಯಲ್ಲಿ ಅಕ್ರಮವಾಗಿ ಮರಳು ತೆಗೆಯಲು ದೋಣಿಗಳು ನಿಲುಗಡೆಗೊಳಿಸಲಾಗಿದ್ದು, ಈಗಾಗಲೇ ಸಾಕಷ್ಟು ಮರಳನ್ನು ಅಕ್ರಮವಾಗಿ ಸಾಗಿಸಲಾಗಿದ್ದು, ಇನ್ನಷ್ಟು ಮೆಳನ್ನು ದಾಸ್ತಾನಿರಿಸಲಾಗುದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಪಾಣೆಮಂಗಳೂರು ಸೇತುವೆ ಹಾಗೂ ಇಲ್ಲೇ ಪಕ್ಕದ ರೈಲ್ವೆ ಸೇತುವೆಯ ಕೆಳಭಾಗದಲ್ಲಿ ಅಕ್ರಮವಾಗಿ ಮರಳುಗಾರಿಕೆ ನಡೆಯುತ್ತಿದೆಯಾದರೂ ಪೊಲೀಸ್ ಇಲಾಖೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿರುವ ಅವರು ಇದರ ವಿರುದ್ಧ ಸೂಕ್ತ ಕಾನೂನು ಕ್ರಮಕ್ಕೆ ಒತ್ತಾಯಿಸಿದ್ದಾರೆ.