ಕೆಲಿಂಜ ಶಾಲಾ ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಣೆ
Tuesday, June 9, 2026
ಬಂಟ್ವಾಳ: ಕೆಲಿಂಜ ದ.ಕ. ಜಿ.ಪಂ.ಸ.ಹಿ.ಪ್ರಾ. ಶಾಲೆ, ಕೆಲಿಂಜ ಇಲ್ಲಿ ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಣಾ ಕಾರ್ಯಕ್ರಮ ನಡೆಯಿತು.
ಒಂದನೇ ತರಗತಿಯಿಂದ ಎಂಟನೇ ತರಗತಿಯವರೆಗಿನ ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಿಸಲಾಯಿತು. ಎಸ್.ಡಿ.ಎಂ.ಸಿ. ಅಧ್ಯಕ್ಷ ಮೋಹಿತ್ ಕುಮಾರ್ ಎಂ. ವಿದ್ಯಾರ್ಥಿಗಳಿಗೆ ಸಾಂಕೇತಿಕವಾಗಿ ಸಮವಸ್ತ್ರ ವಿತರಣೆ ಮಾಡಿದರು.
ಈ ಸಂದರ್ಭ ಎಸ್.ಡಿ.ಎಂ.ಸಿ. ಅಧ್ಯಕ್ಷ ಮೋಹಿತ್ ಕುಮಾರ್ ಎಂ., ಶಾಲೆಯ ಮುಖ್ಯ ಶಿಕ್ಷಕಿ ವನಿತಾ ಹಾಗೂ ಸಹ ಶಿಕ್ಷಕರು ಹಾಗೂ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಶಾಲೆಯ ಎಲ್ಲಾ ಮಕ್ಕಳು ಭಾಗವಹಿಸಿದ್ದರು.
ಶಾಲೆಯ ಮುಖ್ಯ ಶಿಕ್ಷಕಿ ವನಿತಾ ಕಾರ್ಯಕ್ರಮ ನಿರ್ವಹಿಸಿದರು.