ವಿದ್ಯುತ್ ಶಾಕ್ ಹೊಡೆದ ಗಾಯಾಳು ಮೃತ್ಯು
Tuesday, June 30, 2026
ಬಂಟ್ವಾಳ: ಆಕಸ್ಮಿಕವಾಗಿ ವಿದ್ಯುತ್ ಶಾಕ್ ಹೊಡೆದು ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಘಟನೆ ನಡೆದಿದೆ.
ಬಂಟ್ವಾಳ ತಾಲೂಕಿನ ಮೇರಮಜಲು ಗ್ರಾಮದ ಎ. ಇಸ್ಮಾಯಿಲ್ (58) ಮೃತಪಟ್ಟವರೆಂದು ಗುರುತಿಸಲಾಗಿದೆ.
ಇವರು ತನ್ನ ಗೂಡಂಗಡಿಯ ಮುಂದೆ ಶೆಡ್ ನಿರ್ಮಿಸಲು 2 ಕಬ್ಬಿಣದ ಪೈಪನ್ನು ತುಂಡರಿಸಿ ಒಂದನ್ನು ನೆಟ್ಟು ಇನ್ನೊಂದು 20 ಅಡಿ ಉದ್ದದ ಪೈಪನ್ನು ಮೇಲಕ್ಕೆತ್ತಿ ಅದರಲ್ಲಿದ್ದ ಮರಳನ್ನು ತಗೆಯುವ ಸಮಯ ಅಂಗಡಿಯ ಮುಂದೆ ಹಾದು ಹೋಗಿರುವ ವಿದ್ಯುತ್ ತಂತಿಗೆ ಅವರು ಮೇಲಕ್ಕೆತ್ತಿದ ಕಬ್ಬಿಣದ ಪೈಪ್ ತಗುಲಿ ಆಕಸ್ಮಿಕವಾಗಿ ವಿದ್ಯುತ್ ಶಾಕ್ ಹೊಡೆದು ನೆಲಕ್ಕೆ ಬಿದ್ದಿದ್ದರು.
ತಕ್ಷಣ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಫಲಕಾರಿಯಾಗದೇ ಸೋಮವಾರ ರಾತ್ರಿ ವೇಳೆ ಕೊನೆಯುಸಿರೆಳೆದಿದ್ದಾರೆ ಎಂದು ವೈದ್ಯಾಧಿಕಾರಿಯವರು ದೃಡಪಡಿಸಿದ್ದಾರೆ.
ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.