ಬಿ.ಕೆ. ಹರಿಪ್ರಸಾದ್ ಅವರನ್ನು ಉಪಮುಖ್ಯಮಂತ್ರಿಯನ್ನಾಗಿ ನೇಮಿಸುವಂತೆ ಆಗ್ರಹ

ಬಿ.ಕೆ. ಹರಿಪ್ರಸಾದ್ ಅವರನ್ನು ಉಪಮುಖ್ಯಮಂತ್ರಿಯನ್ನಾಗಿ ನೇಮಿಸುವಂತೆ ಆಗ್ರಹ

ಬಂಟ್ವಾಳ: ಕರ್ನಾಟಕದಲ್ಲಿ ಸಾಮಾಜಿಕ ನ್ಯಾಯ, ಸಮಾನ ಪ್ರಾತಿನಿಧ್ಯ ಹಾಗೂ ಹಿಂದುಳಿದ ವರ್ಗಗಳ ರಾಜಕೀಯ ಸಬಲೀಕರಣಕ್ಕೆ ಹೆಚ್ಚಿನ ಒತ್ತು ನೀಡುವ ನಿಟ್ಟಿನಲ್ಲಿ ನಿಯೋಜಿತ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೂತನ ಸಚಿವ ಸಂಪುಟದಲ್ಲಿ ಹಿಂದುಳಿದ ವರ್ಗಗಳ ಕೋಟಾದಲ್ಲಿ ವಿಧಾನಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಅವರನ್ನು ಉಪಮುಖ್ಯಮಂತ್ರಿಯನ್ನಾಗಿ ನೇಮಿಸುವಂತೆ ಒಟ್ಟು ೫೪ ಪ್ರಾಥಮಿಕ ಮೂರ್ತೆದಾರರ ಸೇವಾ ಸಹಕಾರಿ ಸಂಘದ ಪರವಾಗಿ ದಕ್ಷಿಣ ಕನ್ನಡ ಜಿಲ್ಲಾ ಮೂರ್ತೆದಾರರ ಸಹಕಾರಿ ಮಹಾಮಂಡಲಮನವಿ ಮೂಲಕ ಆಗ್ರಹಿಸಿದೆ.

ದಕ್ಷಿಣ ಕನ್ನಡ, ಉಡುಪಿ ಜಿಲ್ಲೆ ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ಬಿಲ್ಲವರು ಬಹು ಸಂಖ್ಯಾತರಾಗಿದ್ದು, ಈ ಸಮಾಜಕ್ಕೆ ಕಳೆದ ಹಲವಾರು ವರ್ಷಗಳಿಂದ ಸರಕಾರದಲ್ಲಿ ಸೂಕ್ತ ಪ್ರಾತಿನಿಧ್ಯ ದೊರಕಿರುವುದಿಲ್ಲ, ಹಾಗಾಗಿ ಬಿಲ್ಲವ ಸಮುದಾಯದ ನಾಯಕರಾದ ದೀರ್ಘಕಾಲದ ರಾಜಕೀಯ ಅನುಭವ ಹೊಂದಿರುವ ಸಂಘಟನಾ ಚಾತುರ್ಯ ಹಾಗೂ ಜನಪರ ಕಾಳಜಿಯ ಮೂಲಕ ಬಿ.ಕೆ. ಹರಿಪ್ರಸಾದ್‌ರವರು ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ವಿಶಿಷ್ಟ ಛಾಪು ಮೂಡಿಸಿದ್ದಾರೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.

ಕರಾವಳಿ ಕರ್ನಾಟಕ ಸೇರಿದಂತೆ ರಾಜ್ಯದ ವಿವಿಧ ಭಾಗಗಳ ಜನರ ಸಮಸ್ಯೆಗಳಿಗೆ ಸ್ಪಂದಿಸಿ ಹಿಂದುಳಿದವರು, ಅಲ್ಪಸಂಖ್ಯಾತರು ಹಾಗೂ ಸಮಾಜದ ಎಲ್ಲಾ ವರ್ಗಗಳ ಧ್ವನಿಯಾಗಿ ಕಾಯನಿರ್ವಹಿಸಿದ್ದು,ಪಕ್ಷದ ರಾಜ್ಯ ಮುಖಂಡರು ಹಾಗೂ ಹೈಕಮಾಂಡ್ ರಾಜ್ಯದ ರಾಜಕೀಯ ಪರಿಸ್ಥಿತಿ, ಸಾಮಾಜಿಕ ಸಮೀಕರಣಗಳು ಹಾಗೂ ಹಿಂದುಳಿದ ವರ್ಗಗಳ ಆಶೋತ್ತರವನ್ನು ಈಡೇರಿಸುವ ನಿಟ್ಟಿನಲ್ಲಿ ಬಿ.ಕೆ. ಹರಿಪ್ರಸಾದ್‌ರವರ ದೀರ್ಘಕಾಲದ ಸೇವೆಯನ್ನು ಪರಿಗಣಿಸಿ ಅವರನ್ನು ಹಿಂದುಳಿದ ಕೋಟಾದಡಿಯಲ್ಲಿ ಕರ್ನಾಟಕ ಸರಕಾರದ ಉಪಮುಖ್ಯಮಂತ್ರಿಯಾಗಿ ನೇಮಕ ಮಾಡುವ ಮೂಲಕ ಸೂಕ್ತ ಗೌರವ ನೀಡಬೇಕೆಂದು ಒತ್ತಾಯಿಸಲಾಗಿದೆ.

ಹಿಂದುಳಿದ ವರ್ಗಗಳ ರಾಜಕೀಯ ಸಬಲೀಕರಣಕ್ಕೆ ಹೊಸ ದಿಕ್ಕು ನೀಡುವುದರ ಜೊತೆಗೆ ಸಾಮಾಜಿಕ ನ್ಯಾಯದ ಪರಿಕಲ್ಪನೆಯನ್ನು ಮತ್ತಷ್ಟು ಬಲಪಡಿಸಲು ಈ ನಿರ್ಧಾರ ಕೈಗೊಳ್ಳುವಂತೆ ದಕ್ಷಿಣ ಕನ್ನಡ ಜಿಲ್ಲಾ ಮೂರ್ತೆದಾರರ ಸಹಕಾರಿ ಮಹಾಮಂಡಲದ ಅಧ್ಯಕ್ಷ ಕೆ. ಸಂಜೀವ ಪೂಜಾರಿ ಮನವಿ ಮೂಲಕ ಒತ್ತಾಯಿಸಿದ್ದರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article