ಬಿಜೆಪಿ ಮುಖಂಡನ ಮನೆಯಲ್ಲಿ ವಿಶ್ವ ಪರಿಸರ ದಿನಾಚರಣೆ
Sunday, June 7, 2026
ಬಂಟ್ವಾಳ: ಭಾರತೀಯ ಜನತಾ ಪಾರ್ಟಿ ಬಂಟ್ವಾಳ ಮಂಡಲ ವತಿಯಿಂದ ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಬಿಜೆಪಿ ನಾವೂರು ಶಕ್ತಿ ಕೇಂದ್ರದ ಪ್ರಮುಖರಾದ ಸದಾನಂದ ಗೌಡ ಅವರ ಮನೆಯಲ್ಲಿ ಶುಕ್ರವಾರ ನಡೆಸಲಾಯಿತು.
ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು ಗಿಡ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಮಂಡಲ ಅಧ್ಯಕ್ಷ ಚೆನ್ನಪ್ಪ ಕೋಟ್ಯಾನ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರೇಮಾನಂದ ಶೆಟ್ಟಿ, ಜಿಲ್ಲಾ ಉಪಾಧ್ಯಕ್ಷ ರಾಕೇಶ್ ರೈ, ಕಾರ್ಯದರ್ಶಿಗಳಾದ ದೇವಪ್ಪ ಪೂಜಾರಿ, ದಿನೇಶ್ ಅಮ್ಟೂರು, ಬಂಟ್ವಾಳ ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಸುದರ್ಶನ್ ಬಜ ಶಿವಪ್ರಸಾದ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.