ಡ್ರಗ್ಸ್ ಮುಕ್ತ ಬಂಟ್ವಾಳಕ್ಕೆ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸಿ: ಯಶ್ ಕುಮಾರ್ ಶರ್ಮಾ

ಡ್ರಗ್ಸ್ ಮುಕ್ತ ಬಂಟ್ವಾಳಕ್ಕೆ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸಿ: ಯಶ್ ಕುಮಾರ್ ಶರ್ಮಾ


ಬಂಟ್ವಾಳ: ವಿದ್ಯಾರ್ಥಿಗಳು ಮಾದಕ ವಸ್ತುಗಳ ಕುರಿತಂತೆ ಸದಾ ಜಾಗೃತಿಯಲ್ಲಿದ್ದು, ಬಂಟ್ವಾಳವನ್ನು ಡ್ರಗ್ಸ್ ಮುಕ್ತಗೊಳಿಸುವಲ್ಲಿ ಯುವ ಸಮುದಾಯವು  ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಬಂಟ್ವಾಳ ಉಪ ವಿಭಾಗದ ಸಹಾಯಕ ಪೊಲೀಸ್ ಅಧೀಕ್ಷಕ ಯಶ್ ಕುಮಾರ್ ಶರ್ಮಾ ಹೇಳಿದರು.


ಗುರುವಾರ ಬಿ.ಸಿ.ರೋಡಿನ ಲಯನ್ಸ್ ಕ್ಲಬ್ ಸಭಾ ಭವನದಲ್ಲಿ ದ.ಕ. ಜಿಲ್ಲಾ ಪೊಲೀಸ್ ಬಂಟ್ವಾಳ ಉಪ ವಿಭಾಗ, ಬಂಟ್ವಾಳ ನಗರ ಪೊಲೀಸ್ ಠಾಣೆ, ಶಿಕ್ಷಣ ಇಲಾಖೆ, ಬಂಟ್ವಾಳ ತಾಲೂಕಿನ ವಿವಿಧ ಶಿಕ್ಷಣ ಸಂಸ್ಥೆಗಳು ಹಾಗೂ ಲಯನ್ಸ್,ರೋಟರಿ ಮತ್ತು ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ‘ಮಾದಕ ವಸ್ತುಗಳ ದುರುಪಯೋಗ ಮತ್ತು ಅಕ್ರಮ ಸಾಗಾಣಿಕೆ ವಿರುದ್ಧ ಅಂತರಾಷ್ಟ್ರೀಯ ದಿನ-ಜನಜಾಗೃತಿ ಅಭಿಯಾನ-2026’ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.


ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದ ಬಂಟ್ವಾಳ ತಾಲೂಕು ಆಸ್ಪತ್ರೆಯ ಆಪ್ತ ಸಮಾಲೋಚಕಿ ಅಕ್ಷತಾ ಹಾಗೂ ಮಂಗಳೂರು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಮಾನಸಿಕ ಆರೋಗ್ಯ ವಿಭಾಗದ ಆಪ್ತ ಸಮಾಲೋಚಕಿ ದಿವ್ಯಾ ಎನ್. ಮಂಗಳೂರು ಅವರು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.

ಬಂಟ್ವಾಳ ನಗರ ಠಾಣೆಯ ಇನ್ಸ್‌ಪೆಕ್ಟರ್ ಅನಂತ ಪದ್ಮನಾಭ ಕೆ.ವಿ., ಬಂಟ್ವಾಳ ಲಯನ್ಸ್ ಕ್ಲಬ್ ಹಾಗೂ ರೋಟರಿ ಕ್ಲಬ್‌ನ ಪದಾಧಿಕಾರಿಗಳು ಉಪಸ್ಥಿತರಿದ್ದರು.

ತಾಲೂಕಿನ ವಿವಿಧ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು, ಬಂಟ್ವಾಳ ನಗರ ಹಾಗೂ ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಭಾಗವಹಿಸಿದ್ದರು.

ಬಳಿಕ ವಿದ್ಯಾರ್ಥಿಗಳಿಂದ ಡ್ರಗ್ಸ್ ವಿರುದ್ಧ ವಿವಿಧ ಘೋಷಣೆಗಳನ್ನೊಳಗೊಂಡ ಪ್ಲೇ ಕಾರ್ಡ್‌ಗಳೊಂದಿಗೆ ಬಿ.ಸಿ ರೋಡ್‌ನಲ್ಲಿ ಕಾಲ್ನಡಿಗೆ ಜಾಥಾ ನಡೆಸಲಾಯಿತು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article