ಸಿದ್ಧಕಟ್ಟೆ ಸರಕಾರಿ ಕಾಲೇಜಿನಲ್ಲಿ ವನಮಹೋತ್ಸವ

ಸಿದ್ಧಕಟ್ಟೆ ಸರಕಾರಿ ಕಾಲೇಜಿನಲ್ಲಿ ವನಮಹೋತ್ಸವ


ಬಂಟ್ವಾಳ: ತಾಲೂಕಿನ ಸಿದ್ಧಕಟ್ಟೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿಶ್ವ ಪರಿಸರ ದಿನದ ಅಂಗವಾಗಿ ಹಿರಿಯ ವಿದ್ಯಾರ್ಥಿ ಸಂಘ, ರಾಷ್ಟ್ರೀಯ ಸೇವಾ ಯೋಜನೆಯ ಘಟಕ ಮತ್ತು ವಿದ್ಯಾರ್ಥಿ ವೇದಿಕೆಯ ಸಹಯೋಗದೊಂದಿಗೆ ವನಮಹೋತ್ಸವವನ್ನು ಆಚರಿಸಲಾಯಿತು.

ಈ ಸಂದರ್ಭದಲ್ಲಿ ವಿವಿಧ ಜಾತಿಯ ಹಣ್ಣುಗಳು ಮತ್ತು ಕಾಡಿನ ಗಿಡಗಳನ್ನು ಕಾಲೇಜಿನ ಕ್ರೀಡಾಂಗಣದ ಸುತ್ತ ನೆಡಲಾಯಿತು.

ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಶಿವರಾಜ್ ಕುಮಾರ್, ಕಾಲೇಜಿನ ಪ್ರಾಂಶುಪಾಲ ಪ್ರೊ. ಗಿರೀಶ ಭಟ್, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಪ್ರೊ. ಹರಿಪ್ರಸಾದ್ ಶೆಟ್ಟಿ, ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಡಾ. ಸುಮನ್ ಶೆಟ್ಟಿ ಮತ್ತಿತರರು ಇದ್ದರು.

ಗಿಡನಾಟಿಯ ಸಂದರ್ಭದಲ್ಲಿ ಕಾಲೇಜಿನ ಬೋಧಕ-ಬೋಧಕೇತರರು, ಹಿರಿಯ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳಾದ ಚಂದ್ರ ಪೂಜಾರಿ, ಚೇತನ್, ಸಂಜಯ್, ಸುಷ್ಮಿತಾ, ವಿದ್ಯಾರ್ಥಿವೇದಿಕೆಯ ಅಧ್ಯಕ್ಷ ಯಶೋಧರ ಮತ್ತು ಪದಾಧಿಕಾರಿಗಳು, ರಾಷ್ಟ್ರೀಯ ಸೇವಾಯೋಜನೆಯ ಸ್ವಯಂಸೇವಕರು ಉಪಸ್ಥಿತರಿದ್ದು, ಶ್ರಮದಾನದ ಮೂಲಕ ಸಹಕರಿಸಿದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article