ಸುಬ್ರಹ್ಮಣ್ಯ ಪ್ಯಾಸೆಂಜರ್ ರೈಲಿನಲ್ಲಿ ಹಲ್ಲೆ: ಬಂಟ್ವಾಳ ರೈಲು ನಿಲ್ದಾಣದಲ್ಲಿ ಮೂವರು ಆರ್‌ಪಿಎಫ್ ವಶಕ್ಕೆ
Wednesday, June 3, 2026
ಬಂಟ್ವಾಳ: ಸುಬ್ರಹ್ಮಣ್ಯ ಪ್ಯಾಸೆಂಜರ್ ರೈಲಿನ ಕೊನೆಯ ಬೋಗಿಯಲ್ಲಿ ಕ್ಷುಲ್ಲಕ ಕಾರಣಕ್ಕೆ ಪ್ರಯಾಣಿಕರೋರ್ವರ ಮೇಲೆ ಹಲ್ಲೆಗೈದ ಆರೋಪದಲ್ಲಿ ಮೂವರನ್ನು ಬಂಟ್ವಾಳ (ಬಿ.ಸಿ.ರೋಡು)ರೈಲ್ವೇ ನಿಲ್ದಾಣದಲ್ಲಿ ರೈಲ್ವೆ ರಕ್ಷಣಾ ಪಡೆ ಸಿಬ್ಬಂದಿಗಳು ವಶಕ್ಕೆ ಪಡೆದುಕೊಂಡ ಘಟನೆ ಮಂಗಳವಾರ ನಡೆದಿದೆ.
ಕೋಡಿಂಬಾಳ ರೈಲು ನಿಲ್ದಾಣದಲ್ಲಿ ಸುಬ್ರಹ್ಮಣ್ಯ ರೈಲು ಹತ್ತಿದ್ದ ಮೂವರು ವ್ಯಕ್ತಿಗಳು ಕೊನೆಯ ಬೋಗಿಯಲ್ಲಿ ಪ್ರಯಾಣಿಕರೋರ್ವರ ಜೊತೆ ಕ್ಷುಲ್ಲಕ ಕಾರಣಕ್ಕೆ ಜಗಳ ಮಾಡಿ ಹಲ್ಲೆಗೈದಿದ್ದರೆನ್ನಲಾಗಿದೆ.
ಈ ಘಟನೆಯ ಹಿನ್ನೆಲೆಯಲ್ಲಿ ರೈಲನ್ನು ಕೆಲ ಹೊತ್ತುಗಳ ಕಾಲ ಬಂಟ್ವಾಳ ರೈಲ್ವೆ ನಿಲ್ದಾಣದಲ್ಲಿ ನಿಲ್ಲಿಸಲಾಗಿತ್ತು. ಬಳಿಕ ಆರ್‌ಪಿಎಫ್ ಸಿಬ್ಬಂದಿಗಳು ರೈಲಿಗೆ ತೆರಳಿ ಆರೋಪಿಗಳನ್ನು ವಶಕ್ಕೆ ಪಡೆದು ಮುಂದಿನ ಕ್ರಮ ಕೈಗೊಂಡರು. ಘಟನೆಯ ಕುರಿತು ತನಿಖೆ ನಡೆಯುತ್ತಿದ್ದು, ಸ್ಪಷ್ಟ ಕಾರಣತಿಳಿದುಬಂದಿಲ್ಲ.