ಮಜಿ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

ಮಜಿ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ


ಬಂಟ್ವಾಳ: ಪ್ರಕೃತಿ ಇದ್ದರೆ ನಾವು, ಪ್ರಕೃತಿ ಮುನಿದರೆ ಸಾವು, ಪರಿಸರ ನಮ್ಮ ಜೀವನದ ಆಧಾರವಾಗಿದ್ದು, ಅರಣ್ಯ ನಾಶ ಮಾಲಿನ್ಯ ಮತ್ತು ಜಾಗತಿಕ ತಾಪಮಾನ ಏರಿಕೆಯಿಂದ ಪರಿಸರಕ್ಕೆ ಹಾನಿಯಾಗುತ್ತಿದೆ ಪರಿಣಾಮ ಹವಾಮಾನದಲ್ಲು ವೈಪರೀತ್ಯವಾಗುತ್ತಿದೆ. ಪ್ರತಿಯೊಬ್ಬರು ಕನಿಷ್ಠ ಒಂದು ಗಿಡವನ್ನು ನೆಟ್ಟು ಅದರ ಹಾರೈಕೆ ಮಾಡಬೇಕು ಪರಿಸರವನ್ನು ಕಾಪಾಡುವ ಸಂಕಲ್ಪವನ್ನು ಎಲ್ಲರೂ ಮಾಡೋಣ ಹಸಿರು ಪರಿಸರ ನಿರ್ಮಾಣಕ್ಕಾಗಿ ಕೈಜೋಡಿಸೋಣ ಎಂದು ವೀರಕಂಬ ಗ್ರಾಮ ವಲಯ ಅರಣ್ಯ ಸಮಿತಿ ಅಧ್ಯಕ್ಷ ವಿಶ್ವನಾಥ ಎಂ. ಹೇಳಿದರು.

ಶುಕ್ರವಾರ ತಾಲೂಕಿನ ವೀರಕಂಬ ಗ್ರಾಮದ ಮಜಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮ ಅಂಗವಾಗಿ ಶಾಲಾ ಆವಾರಣದಲ್ಲಿ ಹಣ್ಣಿನ ಗಿಡವನ್ನು ನಾಟಿ ಮಾಡಿ ಕಾರ್ಯಕ್ರಮಕ್ಕೆ ಚಾಲನೆಗೈದು ಅವರು ಮಾತನಾಡಿದರು.

ಮುಖ್ಯ ಶಿಕ್ಷಕಿ ಬೆನಡಿಕ್ಟಾ ಆಗ್ನೇಸ್ ಮಂಡೋನ್ಸ ವಿಧ್ಯಾರ್ಥಿಗಳೇ ಪರಿಸರ ರಕ್ಷಣೆಯ ಕರ್ತವ್ಯ, ಪ್ಲಾಸ್ಟಿಕ್ ಬಳಕೆಯನ್ನು ನಿಯಂತ್ರಿಸುವುದು ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಡುವ ಹವ್ಯಾಸ, ಮಗು ತನ್ನ ತಾಯಿಯ ಜೊತೆ ಗಿಡವನ್ನು ನೆಟ್ಟು ಪೋಷಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳುವ ಬಗ್ಗೆ ತಿಳಿಸಿದರು.

ವಿದ್ಯಾರ್ಥಿಗಳ ಪರವಾಗಿ 8ನೇ ತರಗತಿಯ ವಿದ್ಯಾರ್ಥಿ ಕೀರ್ತಿಕ ಪರಿಸರದ ಜಾಗೃತಿ ಹಾಗೂ ರಕ್ಷಣೆಯ ಕುರಿತು ಮಾತನಾಡಿದರು.

ಕಲ್ಲಡ್ಕ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಅಧ್ಯಕ್ಷ ಮಾಧವ ಸಾಲಿಯಾನ್ ಕುದ್ರೆಬೆಟ್ಟು, ಎಸ್‌ಡಿಎಂಸಿ ಅಧ್ಯಕ್ಷ ಕೊರಗಪ್ಪ ನಾಯ್ಕ, ಶಾಲಾ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಈಶ್ವರ ಭಟ್ ರಾಕೋಡ್, ವಿದ್ಯಾರ್ಥಿ ಸಂಘದ ಸಂಘಟನಾ ಕಾರ್ಯದರ್ಶಿ ಚಿನ್ನಾ ಮೈರಾ, ಪೋಷಕರಾದ ಯತೀಶ್ ಮೈರಾ, ಶಾಲಾ ಶಿಕ್ಷಕರು, ಶಾಲಾ ಮಕ್ಕಳು ಉಪಸ್ಥಿತರಿದ್ದರು.

ದೈಹಿಕ ಶಿಕ್ಷಣ ಶಿಕ್ಷಕ ಇಂದುಶೇಖರ್ ವಂದಿಸಿದರು. ಹಿರಿಯ ಶಿಕ್ಷಕಿ ಸಂಗೀತ ಶರ್ಮ ಪಿ.ಜಿ. ಕಾರ್ಯಕ್ರಮ ನಿರೂಪಿಸಿದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article